ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿ 
ದೇಶ

ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ: ಎಸ್ ಪಿ ತ್ಯಾಗಿಯನ್ನು ಕೋರ್ಟ್ ಗೆ ಹಾಜರುಪಡಿಸಲಿರುವ ಸಿಬಿಐ

ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣ ಸಂಬಂಧ ಬಂಧಿಸಲಾಗಿರುವ ವಾಯುಪಡೆ ಮಾಜಿ ಮುಖ್ಯಸ್ಥರನ್ನು ಸಿಬಿಐ ಡಿ.10 ರಂದು ಕೋರ್ಟ್ ಗೆ ಹಾಜರುಪಡಿಸಲಿದೆ.

ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣ ಸಂಬಂಧ ಬಂಧಿಸಲಾಗಿರುವ ವಾಯುಪಡೆ ಮಾಜಿ ಮುಖ್ಯಸ್ಥರನ್ನು ಸಿಬಿಐ ಡಿ.10 ರಂದು ಕೋರ್ಟ್ ಗೆ ಹಾಜರುಪಡಿಸಲಿದೆ. 
ಹಗರಣವೊಂದರ ಸಂಬಂಧ ಬಂಧನಕ್ಕೊಳಗಾಗಿರುವ ಸೇನೆಯ ಮೊದಲ ಮಾಜಿ ಮುಖ್ಯಸ್ಥ ತ್ಯಾಗಿಯವರಾಗಿದ್ದು, ತ್ಯಾಗಿಯವರ ಅವರ ಸಹೋದರ ಸಂಬಂಧಿ ಸಂಜೀವ್ ತ್ಯಾಗಿ ಹಾಗೂ ಗೌತಮ್ ಖೇತನ್ ಅವರನ್ನು ಸಿಬಿಐ ದೆಹಲಿಯಲ್ಲಿ ಬಂಧಿಸಿದೆ.
ಎಸ್ ಪಿ ತ್ಯಾಗಿ ಮತ್ತು ಅವರ ಸಹೋದರ ಸಂಬಂಧಿಗಳು ಸೇರಿ ಒಟ್ಟು 13 ಮಂದಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದ್ದು, ತ್ಯಾಗಿ ಅವರು ಅಗಸ್ಟಾ ವೆಸ್ಟ್​ಲ್ಯಾಂಡನ್ನು ಹರಾಜುದಾರರ ಪಟ್ಟಿಗೆ  ಸೇರ್ಪಡೆ ಮಾಡಲು ಅನುಕೂಲವಾಗುವಂತೆ, ಹೆಲಿಕಾಪ್ಟರ್​ನ ಹಾರಾಟದ ಮಿತಿಯನ್ನು 6,000 ಮೀ.ನಿಂದ 4500 ಮೀ.ಗಳಿಗೆ (15,000 ಅಡಿಗಳು) ಇಳಿಸಿದರು. ಇದಕ್ಕೆ ಪ್ರತಿಯಾಗಿ ತ್ಯಾಗಿ  ಭಾರಿ ಪ್ರಮಾಣದ ಕಿಕ್ ಬ್ಯಾಕ್ ಪಡೆದಿದ್ದರು ಎಂಬ ಆರೋಪವನ್ನು ಅವರ ವಿರುದ್ಧ ಮಾಡಲಾಗಿದೆ.
ತ್ಯಾಗಿ ಅವರ ಬಂಧನ ವಿಳಂಬವಾಗಿರುವುದನ್ನು ಪ್ರಶ್ನಿಸಿರುವ ಜೆಡಿಯು ಹಗರಣದಲ್ಲಿ ತ್ಯಾಗಿಯವರ ಹೆಸರು ಹಿಂದಿನಿಂದಲೂ ಕೇಳಿಬಂದಿತ್ತು. ಆದರೆ ಈಗ ಬಂಧನವಾಗಿದೆ. ಈ ಹಿಂದೆಯೇ ಏಕೆ ಅವರನ್ನು ಬಂಧಿಸಿರಲಿಲ್ಲ ಎಂದು ಪ್ರಶ್ನಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ