ದೇಶ

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ: ಸಿಬಿಐ ನಿಂದ ಮಾಜಿ ಪ್ರಧಾನಿ ಸಿಂಗ್, ಪಿಎಂಒ ಮಾಜಿ ಅಧಿಕಾರಿಗಳ ವಿಚಾರಣೆ?

Srinivas Rao BV
ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಫ್ಟರ್ ಹಗರಣದ ಸಂಬಂಧ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹಾಗೂ ಪ್ರಧಾನಿ ಕಾರ್ಯಾಲಯದ ಮಾಜಿ ಅಧಿಕಾರಿಗಳನ್ನು ಸಿಬಿಐ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. 
ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಂಧಿತ ವಾಯುಪಡೆ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೆಸರನ್ನು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮನಮೋಹನ್ ಸಿಂಗ್ ಹಾಗೂ ಅವರ ಅವಧಿಯಲ್ಲಿ ಪ್ರಧಾನಿ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಸಿಬಿಐ ಪ್ರಶ್ನಿಸಲಿದೆ ಎಂದು ಸಿಎನ್ಎನ್-ನ್ಯೂಸ್ 18 ವರದಿ ಮಾಡಿದೆ. 
ಮಾಧ್ಯಮದ ವರದಿಯ ಪ್ರಕಾರ ಮಾಜಿ ಪ್ರಧಾನಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಟಿಕೆಎ ನಾಯರ್, ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಎಂಕೆ ನಾರಾಯಣನ್ ಅವರನ್ನು ವಿಚಾರಣೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.  ಇದೇ ವೇಳೆ ಸಿಬಿಐ ನ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ, ಮಾಜಿ ವಿಶೇಷ ನಿರ್ದೇಶಕ ಸಲೀಮ್ ಅಲಿ ಅವರನ್ನು ವಿಚಾರಣೆ ನಡೆಸಲಾಗುತ್ತದೆ ಎಂಬ ವರದಿಯೂ ಪ್ರಕಟವಾಗಿದೆ. 
SCROLL FOR NEXT