ದಿಲ್ ಸುಖ್ ನಗರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಪ್ರದೇಶ (ಸಂಗ್ರಹ ಚಿತ್ರ) 
ದೇಶ

ದಿಲ್ ಸುಖ್ ನಗರ ಸ್ಫೋಟ ಪ್ರಕರಣ: ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿ ಎಂದ ಕೋರ್ಟ್

2013 ರ ಫೆಬ್ರವರಿ 21 ರಂದು ದಿಲ್ ಸುಖ್ ನಗರದಲ್ಲಿ ಸಂಭವಿಸಿದ್ದ ಅವಳಿ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಹೈದರಾಬಾದ್ ನ ಎನ್ಐಎ ವಿಶೇಷ ನ್ಯಾಯಾಲಯ ಡಿ.13 ರಂದು ತೀರ್ಪು ಪ್ರಕಟಿಸಿದೆ.

ಹೈದರಾಬಾದ್: 2013 ರ ಫೆಬ್ರವರಿ 21 ರಂದು ದಿಲ್ ಸುಖ್ ನಗರದಲ್ಲಿ ಸಂಭವಿಸಿದ್ದ ಅವಳಿ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಹೈದರಾಬಾದ್ ನ ಎನ್ಐಎ ವಿಶೇಷ ನ್ಯಾಯಾಲಯ ಡಿ.13 ರಂದು ತೀರ್ಪು ಪ್ರಕಟಿಸಿದ್ದು, ಪ್ರಕರಣದಲ್ಲಿ ಆರೋಪಿಗಳಾಗಿದ್ದ 5 ಜನರನ್ನು ಅಪರಾಧಿಗಳೆಂದು ಘೋಶಿಸಿದೆ. 
ಅಸಾದುಲ್ಲಾ ಅಖ್ತರ್, ಯಾಸಿನ್ ಭಟ್ಕಳ್, ನಬೀಲ್ ಅಹ್ಮದ್, ತಾಹ್ ಸೇನ್ ಅಖ್ತರ್(ಮೋನು) ಅಜೀಜ್ ಸಯೀದ್, ಆಜಾಜ್ ಶೇಖ್ ಅಪರಾಧಿಗಳೆಂದು ಎನ್ಐಎ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು 2014 ರ ಸೆ.5 ರಂದು ಬಂಧಿಸಲಾಗಿತ್ತು. 2013 ರ ಫೆಬ್ರವರಿ ತಿಂಗಳಲ್ಲಿ ನಡೆದಿದ್ದ ಅವಳಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 19 ಜನರು ಮೃತಪಟ್ಟಿದ್ದರು. 
ಬಂಧಿತ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302, 307, 324, 326, 124 A, 153 ಎ, 120 ಬಿ ಸ್ಫೋಟಕಗಳ ವಸ್ತುಗಳ ಕಾಯ್ದೆಯ ಸೆಕ್ಷನ್ 16, 18 ಹಾಗೂ 20 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಅಪರಾಧಿಗಳಿಗೆ ಡಿ.19 ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್