ಶ್ರೀನಗರ: ಡಿ.14 ರಂದು ನಡೆದ ಉಗ್ರನ ಹತ್ಯೆಯನ್ನು ಖಂಡಿಸಿ ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್ ಬೆಹರಾ ದಲ್ಲಿ ಬುಧವಾರ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಭದ್ರತಾ ಪಡೆಯ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಲು ಪ್ರಾರಂಭಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಹತ್ಯೆಯಾದ ಉಗ್ರನಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು ಉಗ್ರರು ಅಡಗಿ ಕುಳಿತಿರುವ ಮಾಹಿತಿಯನ್ನು ಆಧರಿಸಿ ಭದ್ರತಾ ಸಿಬ್ಬಂದಿ ನಡೆಸುತ್ತಿರುವ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಬಸಿತ್ ರಸೂಲ್ ಹತ್ಯೆಗೀಡಾಗಿರುವ ಉಗ್ರನಾಗಿದ್ದು, ಭಯೋತ್ಪಾದನೆಗೆ ಸೇರುವ ಮೊದಲು ಇಸ್ಲಾಮಿಕ್ ವಿಶ್ವವಿದ್ಯಾನಿಲಯದ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಬಿ.ಟೆಕ್ ವಿದ್ಯಾರ್ಥಿಯಾಗಿದ್ದ.