ವಿಕಾಸ್ ಸ್ವರೂಪ್ 
ದೇಶ

ಸಿಂಧೂ ನದಿ ಒಪ್ಪಂದವನ್ನು ದ್ವಿಪಕ್ಷೀಯ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು: ಪಾಕಿಸ್ತಾನಕ್ಕೆ ಭಾರತ ಸಲಹೆ

56 ವರ್ಷಗಳ ಹಿಂದಿನ ಸಿಂಧೂ ನದಿ ನೀರು ಒಪ್ಪಂದ ಕುರಿತಂತೆ ತಲೆದೋರಿರುವ ಸಮಸ್ಯೆಗಳನ್ನು ದ್ವಿಪಕ್ಷೀಯ ಮಾತುಕತೆಗಳ ಮೂಲಕ

ನವದೆಹಲಿ: 56 ವರ್ಷಗಳ ಹಿಂದಿನ ಸಿಂಧೂ ನದಿ ನೀರು ಒಪ್ಪಂದ ಕುರಿತಂತೆ ತಲೆದೋರಿರುವ ಸಮಸ್ಯೆಗಳನ್ನು ದ್ವಿಪಕ್ಷೀಯ ಮಾತುಕತೆಗಳ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಪಾಕಿಸ್ತಾನಕ್ಕೆ ಭಾರತ ಸಲಹೆ ನೀಡಿದೆ.

ಕಿಶನ್ ಗಂಗಾ ಮತ್ತು ರಾಟ್ಲೆ ಯೋಜನೆಗಳ ವಿವಾದವನ್ನು ಪ್ರತ್ಯೇಕವಾಗಿ ಬಗೆಹರಿಸಿಕೊಳ್ಳಬೇಕು ಎಂದು ವಿಶ್ವಬ್ಯಾಂಕ್ ಘೋಷಿಸಿದ ನಂತರ ಭಾರತ ಪಾಕಿಸ್ತಾನಕ್ಕೆ ಸಲಹೆ ನೀಡಿದೆ.

ಕಿಶನ್ ಗಂಗಾ ಯೋಜನೆಗೆ ಪಾಕಿಸ್ತಾನ ಯಾಕೆ ಅಡ್ಡಗಾಲು ಹಾಕುತ್ತಿದೆ, ಅದಕ್ಕಿರುವ ತಾಂತ್ರಿಕ ಕಾರಣ ಏನು ಎಂಬುದು ಅರ್ಥವಾಗುತ್ತಿಲ್ಲ. ಈ ಸಮಸ್ಯೆ ಬಗೆಹರಿಸಲು ಎರಡು ಕಡೆಯ ತಜ್ಞರ ಸಲಹೆ ಪಡೆದುಕೊಳ್ಳಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರುಪ್ ತಿಳಿಸಿದ್ದಾರೆ.

ಸಿಂಧೂ ನದಿ ಒಪ್ಪಂದದ ನೀತಿ ನಿಯಮಗಳನ್ನು ಅನುಷ್ಠಾನ ಗೊಳಿಸುವಲ್ಲಿ ಭಾರತಕ್ಕೆ ಯಾವಾಗಲು ನಂಬಿಕೆಯಿದೆ. ತಾಂತ್ರಿಕ ಕಾರಣಗಳು ಹಾಗೂ ಎರಡು ದೇಶಗಳ ನಡುವೆ ಇರುವ ವ್ಯತ್ಯಾಸಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ದ್ವಿಪಕ್ಷೀಯ ಮಾತುಕತೆಗಳ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಂಡಿರುವ ಉದಾಹರಣೆ ನಮ್ಮ ಕಣ್ಣ ಮುಂದಿವೆ.ಹೀಗಾಗಿ  ಈ ಸಮಸ್ಯೆಯನ್ನು ಕೂಡ ಅದೇ ರೀತಿ ಬಗೆಹರಿಸಿಕೊಳ್ಳಬೇಕು ಎಂದು ಅವರು ಬಲವಾಗಿ ಪ್ರತಿಪಾದಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FlyDubai ವಿಮಾನ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಸಹ ಪೈಲಟ್‌ ಉಗ್ರವಾದ ಹಿನ್ನಲೆಯವನೇ?

ಏಷ್ಯನ್ ಗೇಮ್ಸ್ 2026: 'ರಿಕರ್ವ್ ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಮೊಹೋದ್ ಕುಂಕುಮ್!

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!