ಸಂಸತ್ತಿನಲ್ಲಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿರೋಧ ಪಕ್ಷಗಳು 
ದೇಶ

ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತ ಪಕ್ಷದಿಂದ ಕಲಾಪಕ್ಕೆ ಅಡ್ಡಿ: ಕಾಂಗ್ರೆಸ್

ಎಂದಿನಂತೆ ಮತ್ತೆ ರಾಜ್ಯಸಭಾ ಕಲಾಪದಲ್ಲಿ ಗದ್ದಲವುಂಟಾಗಿದ್ದು, ಕೇಂದ್ರ ಸರ್ಕಾರದ ವಿರುದ್ದ ವಿರೋಧ ಪಕ್ಷಗಳು ತೀವ್ರವಾಗಿ ವಾಗ್ದಾಳಿ ನಡೆಸುತ್ತಿದೆ...

ನವದೆಹಲಿ: ಎಂದಿನಂತೆ ಮತ್ತೆ ರಾಜ್ಯಸಭಾ ಕಲಾಪದಲ್ಲಿ ಗದ್ದಲವುಂಟಾಗಿದ್ದು, ಕೇಂದ್ರ ಸರ್ಕಾರದ ವಿರುದ್ದ ವಿರೋಧ ಪಕ್ಷಗಳು ತೀವ್ರವಾಗಿ ವಾಗ್ದಾಳಿ ನಡೆಸುತ್ತಿದೆ.

ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷ ಬಿಜೆಪಿ ಸಂಸತ್ತು ಸರಿಯಾಗಿ ಕಾರ್ಯನಿರ್ವಹಿಸಲು ಬಿಡುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಹೇಳಿದ್ದಾರೆ.

ಕಲಾಪ ಆರಂಭವಾಗುತ್ತಿದ್ದಂತೆಯೇ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರ ಮೇಲೆ ಕೇಳಿ ಬಂದಿರುವ ರು.450 ಕೋಟಿ ಅವ್ಯವಹಾರ ಆರೋಪ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಲು ಆರಂಭಿಸಿದ್ದವು. ಇದರಂತೆ ಆಡಳಿತಾರೂಢ ಬಿಜೆಪಿ ಪಕ್ಷ ಕೂಡ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಹಗರಣ ಪ್ರಕರಣವನ್ನು ಪ್ರಸ್ತಾಪ ಮಾಡಿತು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು, ದುಬಾರಿ ನೋಟಿನ ಮೇಲೆ ನಿಷೇಧ ಹೇರಿದ ಬಳಿಕ ರೈತರು ಸಾಕಷ್ಟು ಸಂಕಷ್ಟವನ್ನು ಎದುರಿಸುತ್ತಿದ್ದು, ಬಿಜೆಪಿ ಪಕ್ಷ ರೈತರ ಕುರಿತಂತೆ ಗಮನ ಹರಿಸುತ್ತಿಲ್ಲ. ರೈತರಿಗೆ ಬೆಂಬಲವನ್ನು ನೀಡುತ್ತಿಲ್ಲ ಎಂದು ಹೇಳಿದರು.

ಅಲ್ಲದೆ, ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷ ಬಿಜೆಪಿ ಸಂಸತ್ತು ಸರಿಯಾಗಿ ಕಾರ್ಯನಿರ್ವಹಿಸಲು ಬಿಡುತ್ತಿಲ್ಲ ಎಂದು ಆರೋಪಿಸಿದರು.

ಈ ವೇಳೆ ವಿರೋಧ ಪಕ್ಷದ ನಾಯಕರು ಹಾಗೂ ಆಡಳಿತರೂಢ ಪಕ್ಷದ ನಾಯಕರ ನಡುವೆ ತೀವ್ರ ಮಾತಿನ ಚಕಮಕಿ ನಡೆದ ಹಿನ್ನಲೆಯಲ್ಲಿ ಕಲಾಪಕ್ಕೆ ತೀವ್ರ ಅಡ್ಡಿಯುಂಟಾಯಿತು. ಮಧ್ಯೆ ಪ್ರವೇಶ ಮಾಡಿದ ಸ್ಪೀಕರ್ ಪಿ.ಜೆ. ಕುರಿಯನ್ ಅವರು, ಸಂಸದರು ಸಮಾಧಾನದಿಂದ ಕುಳಿತುಕೊಳ್ಳುವಂತೆ ಮನವಿ ಮಾಡಿದರು. ಈ ವೇಳೆ ಆಜಾದ್ ಅವರ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇದೆಲ್ಲಾ ಒಂದೆರಡು ತಿಂಗಳಷ್ಟೆ, ಭಾರತ ಮತ್ತೆ ಮಾತುಕತೆಗೆ ಬರಲಿದೆ, ಕ್ಷಮೆಯಾಚಿಸುತ್ತದೆ: ಅಮೆರಿಕ ವಾಣಿಜ್ಯ ಸಚಿವ ಲುಟ್ನಿಕ್

'ಇಸ್ಲಾಂಗೆ ವಿರುದ್ಧ': ದರ್ಗಾದ ಫಲಕದಲ್ಲಿನ ಅಶೋಕ ಲಾಂಛನ ವಿರೂಪಗೊಳಿಸಿದ ಸ್ಥಳೀಯರು!: Video

ಕರಾಳ ಚೀನಾಕ್ಕೆ ಭಾರತವನ್ನು ಕಳೆದುಕೊಂಡಂತೆ ಅನಿಸಿದೆ: ಜಗತ್ತಿನ ಗಮನ ಸೆಳೆದ ಡೊನಾಲ್ಡ್ ಟ್ರಂಪ್ ಪೋಸ್ಟ್!

GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಏಕಿಲ್ಲ?: GST 3.0 ಬಗ್ಗೆ Nirmala Sitharaman ಹೇಳಿದ್ದೇನು?

"GST ಇಳಿಕೆಯ ಲಾಭ ಗ್ರಾಹಕರಿಗೆ ತಲುಪಿಸಲು ಬದ್ಧ": TATA ಕಾರುಗಳ ಬೆಲೆಯಲ್ಲಿ ಭಾರಿ ಇಳಿಕೆ: ವಿವರ ಇಂತಿದೆ..

SCROLL FOR NEXT