ಕೊಲ್ಕೊತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ಊರ್ಜಿತ್ ಪಟೇಲ್ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.
ಗುರುವಾರ ನಬನ್ನಾದ ರಾಜ್ಯ ಕಾರ್ಯಾಲಯದಲ್ಲಿ ಭೇಟಿಯಾಗಿ ಸುಮಾರು 40 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ನೋಟು ನಿಷೇಧದಿಂದಾಗಿ ಜನ ಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಊರ್ಜಿತ್ ಪಟೇಲ್ ಅವರ ಗಮನಕ್ಕೆ ತಂದಿರುವುದಾಗಿ ಮಮತಾ ತಿಳಿಸಿದ್ದಾರೆ.
ಭೇಟಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ,ಸರ್ಕಾರದ ನೋಟು ನಿಷೇಧ ಕಾರ್ಯದಿಂದಾಗಿ ದೇಶಾದ್ಯಂತ ಹಣದ ಕೊರತೆ ಹಾಗೂ ಎದುರಾಗಿರುವ ತೊಂದರೆಗಳ ಬಗ್ಗೆ ವಿವರಿಸಿದ್ದೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮತ್ತೊಂದೆಡೆ ರಿಸರ್ವ್ ಬ್ಯಾಂಕ್ ಪ್ರಧಾನ ಕಚೇರಿ ಎದುರು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಚಿವರು ಊರ್ಜಿತ್ ಪಟೇಲ್ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದರು. ಈ ವೇಳೆ ಊರ್ಜಿತ್ ಪಟೇಲ್ ಹಿಂಬದಿಯ ಬಾಗಿಲ ಮೂಲಕ ರಿಸರವ್ ಬ್ಯಾಂಕ್ ಪ್ರಧಾನ ಕಚೇರಿ ಒಳಗೆ ತೆರಳಿದರು.