ಹೌರಾ ನಿಲ್ದಾಣದಲ್ಲಿ ಅಗ್ನಿ ಅವಘಡ 
ದೇಶ

ಪ.ಬಂಗಾಳ: ಹೌರಾ ರೈಲ್ವೇ ನಿಲ್ದಾಣದಲ್ಲಿ ಅಗ್ನಿ ಆಕಸ್ಮಿಕ; 6 ಅಗ್ನಿಶಾಮಕ ವಾಹನಗಳ ದೌಡು

ಕೋಲ್ಕತಾದಲ್ಲಿರುವ ಅತ್ಯಂತ ಹಳೆಯ ರೈಲ್ವೇ ನಿಲ್ದಾಣ ಎಂಬ ಖ್ಯಾತಿಗಳಿಸಿರುವ ಹೌರಾ ರೈಲ್ವೇ ನಿಲ್ದಾಣದಲ್ಲಿ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 6ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.

ಕೋಲ್ಕತಾ: ಕೋಲ್ಕತಾದಲ್ಲಿರುವ ಅತ್ಯಂತ ಹಳೆಯ ರೈಲ್ವೇ ನಿಲ್ದಾಣ ಎಂಬ ಖ್ಯಾತಿಗಳಿಸಿರುವ ಹೌರಾ ರೈಲ್ವೇ ನಿಲ್ದಾಣದಲ್ಲಿ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 6ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ  ಕಾರ್ಯದಲ್ಲಿ ತೊಡಗಿದೆ.

ಹೌರಾ ನಿಲ್ದಾಣದ ಹಳೆಯ ಕಾಂಪ್ಲೆಕ್ಸ್ ಪ್ರದೇಶದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿದ್ದ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿದ ಕೂಡಲೇ  ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಒಂದೂವರೆ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ತಿಳಿದುಬಂದಿದೆ. ನಿಲ್ದಾಣದ ಫುಡ್ ಫ್ಲಾಜಾ ಸಂಕೀರ್ಣದಲ್ಲಿ  ಮೊದಲು ಬೆಂಕಿ ಹೊತ್ತಿಕೊಂಡಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಈ ವರೆಗೂ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರ ಅಥವಾ ಗಾಯಗೊಂಡವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಇನ್ನು ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದೆ. ಆದರೂ ಸ್ಥಳಕ್ಕಾಗಮಿಸಿರುವ ರೈಲ್ವೇ ಪೊಲೀಸರು ಘಟನೆ ಕುರಿತಂತೆ ತನಿಖೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ