ಸಾಂದರ್ಭಿಕ ಚಿತ್ರ 
ದೇಶ

ವಿಕಲಾಂಗರ ಹಕ್ಕು ಮಸೂದೆ-2016ಕ್ಕೆ ಲೋಕಸಭೆ ಒಪ್ಪಿಗೆ

ವಿಕಲಾಂಗ ವ್ಯಕ್ತಿಗಳ ಹಕ್ಕು ಮಸೂದೆ-2016ಕ್ಕೆ ಲೋಕಸಭೆ ಶುಕ್ರವಾರ ಅಂಗೀಕಾರ ನೀಡಿದ್ದು...

ನವದೆಹಲಿ: ವಿಕಲಾಂಗ ವ್ಯಕ್ತಿಗಳ ಹಕ್ಕು ಮಸೂದೆ-2016ಕ್ಕೆ ಲೋಕಸಭೆ ಶುಕ್ರವಾರ ಅಂಗೀಕಾರ ನೀಡಿದ್ದು, ಅದು 1995ರ ವಿಕಲಾಂಗ ವ್ಯಕ್ತಿಗಳ ಕಾಯ್ದೆಗೆ ಬದಲಾಗಿದೆ.
ಮಸೂದೆ ಮಂಡಿಸಿ ಮಾತನಾಡಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಸಚಿವ ತಾವರ್ ಚಂದ್ ಗೆಹ್ಲೊಟ್, ವಿವಿಧ ವಿಕಲಾಂಗಗಳ ಸಂಖ್ಯೆಯನ್ನು 7ರಿಂದ 21ಕ್ಕೇರಿಸಲಾಗಿದ್ದು, ದಿವ್ಯಾಂಗರು ವಿವಿಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೌಲಭ್ಯಗಳನ್ನು ಪಡೆಯಬಹುದು ಎಂದರು.
ಅಲ್ಲದೆ ವಿಕಲಾಂಗರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 3ರಷ್ಟು ಮೀಸಲಾತಿಯಿಂದ ಹೊಸ ಕಾಯ್ದೆ ಮೂಲಕ ಶೇಕಡಾ 4ರಷ್ಟು ಮೀಸಲಾತಿಗೆ ಏರಿಕೆ ಮಾಡಲಾಗಿದೆ. ರಾಜ್ಯಸಭೆಯಲ್ಲಿ ಮೊನ್ನೆ ಮಂಗಳವಾರ ಚರ್ಚೆ ಬಳಿಕ ಮಸೂದೆಯನ್ನು ಅಂಗೀಕರಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ