ವೆಂಕಯ್ಯ ನಾಯ್ಡು 
ದೇಶ

ಭಯೋತ್ಪಾದಕರು ಹಾಗೂ ಭ್ರಷ್ಟಾಚಾರದ ಪರ ವಿಪಕ್ಷಗಳ ಹೋರಾಟ: ವೆಂಕಯ್ಯ ನಾಯ್ಡು

ಭಯೋತ್ಪಾದನೆ ಹಾಗೂ ಭ್ರಷ್ಟರ ಪರವಾಗಿ ವಿಪಕ್ಷಗಳು ಹೋರಾಟ ನಡೆಸುತ್ತಿವೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ...

ನವದೆಹಲಿ:  ಭಯೋತ್ಪಾದನೆ ಹಾಗೂ ಭ್ರಷ್ಟರ ಪರವಾಗಿ ವಿಪಕ್ಷಗಳು ಹೋರಾಟ ನಡೆಸುತ್ತಿವೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಆರೋಪಿಸಿದ್ದಾರೆ.

ಮೊದಲು ವಿರೋಧ ಪಕ್ಷಗಳು ಭ್ರಷ್ಟಾಚಾರದ ವಿರುದ್ಧ ದನಿ ಎತ್ತುತ್ತಿದ್ದವು, ಆಗ ಆಡಳಿತ ಪಕ್ಷ ಅದನ್ನು ಹತ್ತಿಕ್ಕುತ್ತಿತ್ತು, ಆದರೆ ಈಗ ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧ  ಸರ್ಕಾರದ ಹೋರಾಟಕ್ಕೆ ವಿಪಕ್ಷಗಳು ತಡೆ ಒಡ್ಡುತ್ತಿದ್ದು, ಭಯೋತ್ಪಾದಕರು ಮತ್ತು ಭ್ರಷ್ಟಾಚಾರದ ಪರವಾಗಿ ನಿಂತಿವೆ ಎಂದು ನಾಯ್ಡು ಆರೋಪಿಸಿದ್ದಾರೆ.

ಅನಾಣ್ಯೀಕರಣವನ್ನು ಸಮರ್ಥಿಸಿಕೊಂಡ ವೆಂಕಯ್ಯ ನಾಯ್ಡು, ಇದೊಂದು ಐತಿಹಾಸಿಕ ಹಾಗೂ ದಿಟ್ಟ ನಿರ್ಧಾರ ಎಂದು ಹೇಳಿದ್ದಾರೆ. ಸರ್ಕಾರ ಭ್ರಷ್ಟಾಚಾರ ಹಾಗೂ ಕಪ್ಪು ಹಣದ ವಿರುದ್ಧ ಹೋರಾಟ ನಡೆಸುತ್ತಿದೆ, ಆದರೆ ವಿರೋಧ ಪಕ್ಷಗಳು ಭ್ರಷ್ಟರ ಬೆಂಬಲಕ್ಕೆ ನಿಲ್ಲುತ್ತಿವೆ ಎಂದು ಆಪಾದಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video