ಮುಂಬೈ: ಅಪಾರ ಪ್ರಮಾಣದ ಅಕ್ರಮ ಹಣವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಮೂವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ಹಣ ಸಾಗಾಟ ಮಾಡುತ್ತಿದ್ದ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಪೂರ್ವ ಮುಂಬೈನ ಚೆಂಬೂರು ಪ್ರಾಂತ್ಯದಲ್ಲಿ ಅಕ್ರಮವಾಗಿ ಹಣ ಸಾಗಾಟ ಮಾಡಲಾಗುತ್ತಿದೆ ಎಂಬ ವಿಚಾರ ತಿಳಿದ ಪೊಲೀಸರು ಕೂಡಲೇ ಕಾರ್ಯಾಚರಣೆ ನಡೆಸಿ ಕಾರನ್ನು ಮತ್ತು ಕಾರಿನಲ್ಲಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಅಂತೆಯೇ ಕಾರಿನಲ್ಲಿದ್ದ ಸುಮಾರು 10.10ಕೋಟಿ ಹಣವನ್ನು ಪೊಲೀಸರು ವಸಕ್ಕೆ ಪಡೆದಿದ್ದು, ಈ ಪೈಕಿ ನಿಷೇಧಿತ 500 ರು. ಮುಖಬೆಲೆಯ 5 ಕೋಟಿ ಹಣ ಹಾಗೂ ಹೊಸ 2000 ರು. ಮುಖಬೆಲೆಯ 5 ಕೋಟಿ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ತಿಲಕನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದ್ದು, ಸುಮಾರು 4 ಚೀಲಗಳಲ್ಲಿ ತುಂಬಿದ್ದ ಅಪಾರ ಪ್ರಮಾಣದ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರು ಈ ಹಣ ಪುಣೆಯ ಸಹಕಾರಿ ಬ್ಯಾಂಕ್ ಗೆ ಹೇಳಿಕೊಳ್ಳುತ್ತಿದ್ದು, ಈ ಪೈಕಿ ಇಬ್ಬರು ತಾವು ಬ್ಯಾಂಕ್ ನ ಸಿಬ್ಬಂದಿಗಳು ಎಂದು ಹೇಳಿಕೊಂಡಿದ್ದಾರೆ. ಹೀಗಾಗಿ ಪೊಲೀಸರು ಈ ಬಗ್ಗೆ ಕೂಲಂಕುಷ ತನಿಖೆ ನಡೆಸುತ್ತಿದ್ದಾರೆ.