ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿರುವ ವಿರೋಧ ಪಕ್ಷದ ನಾಯಕರು 
ದೇಶ

ಪ್ರಧಾನಿ ಮೋದಿ ಭೇಟಿಯಾದ ರಾಹುಲ್: ರೈತರ ಸಾಲ ಮನ್ನಾ ಮಾಡುವಂತೆ ಮನವಿ ಪತ್ರ ಸಲ್ಲಿಕೆ

ರೈತರ ಸಾಲ ಮನ್ನಾ ಕುರಿತಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದು, ಮನವಿ ಪತ್ರವೊಂದನ್ನು ಸಲ್ಲಿಕೆ ಮಾಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

ನವದೆಹಲಿ: ರೈತರ ಸಾಲ ಮನ್ನಾ ಕುರಿತಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದು, ಮನವಿ ಪತ್ರವೊಂದನ್ನು ಸಲ್ಲಿಕೆ ಮಾಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಇಂದು ಬೆಳಿಗ್ಗೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿರುವ ರಾಹುಲ್ ಗಾಂಧಿಯವರು 5 ನಿಮಿಷಗಳ ಕಾಲ ಮೋದಿಯವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.

ಮಾತುಕತೆ ವೇಳೆ ರೈತರ ಸಮಸ್ಯೆಗಳನ್ನು ಪ್ರಸ್ತಾಪ ಮಾಡಿರುವ ರಾಹುಲ್ ಗಾಂಧಿಯವರು, ರೈತರ ಸಾಲವನ್ನು ಮನ್ನಾ ಮಾಡುವಂತೆ ಮನವಿ ಪತ್ರವೊಂದನ್ನು ಸಲ್ಲಿಕೆ ಮಾಡಿದ್ದಾರೆಂದು ತಿಳಿದುಬಂದಿದೆ.

ಭೇಟಿ ಬಳಿಕ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿಯವರು, ಮನವಿ ಪತ್ರವನ್ನು ಪ್ರಧಾನಿ ಮೋದಿಯವರು ಸ್ವೀಕರಿಸಿದ್ದಾರೆ. ರೈತರ ಪರಿಸ್ಥಿತಿ ಸಂಕಷ್ಟದಲ್ಲಿರುವುದನ್ನು ಮೋದಿಯವರು ಒಪ್ಪಿಕೊಂಡಿದ್ದು, ರೈತರ ಸಾಲ ಮನ್ನಾ ಕುರಿತಂತೆ ಮೋದಿಯವರು ಯಾವುದೇ ಪ್ರತಿಕ್ರಿಯೆಗಳನ್ನು ನೀಡಲಿಲ್ಲ ಎಂದು ಹೇಳಿದ್ದಾರೆ.

ಮನವಿ ಸಲ್ಲಿಸಿದ ಬಳಿಕ ರೈತರ ಸಮಸ್ಯೆ ಬಗ್ಗೆ ಮೋದಿಯವರೊಂದಿಗೆ ಮಾತುಕತೆ ನಡೆಸಲಾಯಿತು. ಈ ವೇಳೆ ಮೋದಿಯವರು ಸಮಸ್ಯೆಯನ್ನು ಆಲಿಸಿದ್ದರೇ ವಿನಃ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ. ಹಾಗೂ ಸಾಲ ಮನ್ನಾ ಕುರಿತಂತೆ ಯಾವುದೇ ಮಾತನ್ನೂ ಆಡಲಿಲ್ಲ. ದೇಶದಲ್ಲಿ ಇಂದು ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸಮಸ್ಯೆಗಳಿಂದಾಗಿ ರೈತರು ಆತ್ಮಹತ್ಯೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಗೋಧಿ ಆಮದುಗಳ ಮೇಲೆ ಸುಂಕವನ್ನು ಕಡಿತಗೊಳಿಸುವುದು ವಿನಾಶಕಾರಿ ಬೆಳವಣಿಗೆಯಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!