ಅಹ್ಮದ್ ಪಟೇಲ್ ಟ್ವೀಟ್ 
ದೇಶ

ಸರ್ಕಾರದಿಂದ ಕಪ್ಪುಹಣಕ್ಕೆ ಉತ್ತೇಜನ: ಅಹ್ಮದ್ ಪಟೇಲ್

ಕೇಂದ್ರ ಸರ್ಕಾರದ ವಿರುದ್ಧ ಕಪ್ಪುಹಣಕ್ಕೆ ಉತ್ತೇಜನ ನೀಡುತ್ತಿರುವ ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್, ಕೇಂದ್ರ ಸರ್ಕಾರಕ್ಕೆ ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳುವಂತೆ ಸಲಹೆ

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಕಪ್ಪುಹಣಕ್ಕೆ ಉತ್ತೇಜನ ನೀಡುತ್ತಿರುವ ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್, ಕೇಂದ್ರ ಸರ್ಕಾರಕ್ಕೆ ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳುವಂತೆ ಸಲಹೆ ನೀಡಿದ್ದಾರೆ. 
1000, 2000 ರೂ ಮುಖಬೆಲೆಯ ಎರಡೂ ನೋಟುಗಳನ್ನು ಪರಿಚಯಿಸಿರುವುದು ಎನ್ ಡಿಎ ಸರ್ಕಾರವೇ. ಗರಿಷ್ಠ ಮುಖಬೆಲೆಯ ನೋಟುಗಳನ್ನು ಪರಿಚಯಿಸುವ ಮೂಲಕ ಎನ್ ಡಿಎ ಸರ್ಕಾರ ಕಪ್ಪುಹಣಕ್ಕೆ ಉತ್ತೇಜನ ನೀಡುತ್ತಿದೆ ಎಂದು ಅಹ್ಮದ್ ಪಟೇಲ್ ಆರೋಪಿಸಿದ್ದಾರೆ. 
ನಾನು ಮಾಜಿ ಪ್ರಧಾನಿ ವಾಜಪೇಯಿ ಅವರನ್ನು ಗೌರವಿಸುತ್ತೇನೆ. 1978 ರಲ್ಲಿ 1000 ರೂ ಮುಖಬೆಲೆಯ ನೋಟು ನಿಷೇಧದ ನಿರ್ಧಾರ ಘೋಷಣೆಯಾದಾಗ ವಾಜಪೇಯಿ ಅವರು ನಿರ್ಧಾರದ ಭಾಗವಾಗಿದ್ದರು. ಆದರೆ ಅವರೇ ಪ್ರಧಾನಿಯಾದ ಬಳಿಕ 1000 ರೂ ಮುಖಬೆಲೆಯ ನೋಟುಗಳನ್ನು ಪುನಃ ಪರಿಚಯಿಸಿದರು. ವಾಜಪೇಯಿ ಅವರ ನಿರ್ಧಾರವನ್ನು ಮುಂದಿಟ್ಟುಕೊಂಡು ಅವರಿಗೆ ರಾಷ್ಟ್ರದ ಹಿತಾಸಕ್ತಿಗಿಂತ ಪಕ್ಷದ ಹಿತಾಸಕ್ತಿಯೇ ಮುಖ್ಯವಾಗಿತ್ತು ಎಂದು ಹೇಳಲು ಆಗುತ್ತದೆಯೇ ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿರುಗೇಟು ನೀಡಿದ್ದಾರೆ. 
ನೋಟು ನಿಷೇಧದ ವಿಷಯವಾಗಿ ಗದ್ದಲ ಉಂಟುಮಾಡಿ ಸಂಸತ್ ಕಲಾಪಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಗೆ ರಾಷ್ಟ್ರದ ಹಿತಾಸಕ್ತಿಗಿಂತ ಪಕ್ಷದ ಹಿತಾಸಕ್ತಿಯೇ ಮುಖ್ಯ ಎಂದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ