ಕೇಂದ್ರ ಸಂಸದೀಯ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ 
ದೇಶ

ಕಾಂಗ್ರೆಸ್ ಹಾಗೂ ಭ್ರಷ್ಟಾಚಾರ ಒಂದೇ ನಾಣ್ಯದ ಎರಡು ಮುಖವಿದ್ದಂತೆ: ಮುಖ್ತಾರ್ ಅಬ್ಬಾಸ್ ನಖ್ವಿ

ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಎಂಬುದು ಒಂದೇ ನಾಣ್ಯದ ಎರಡು ಮುಖವಿದ್ದಂತೆ ಎಂದು ಕೇಂದ್ರ ಸಂಸದೀಯ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಭಾನುವಾರ ಹೇಳಿದ್ದಾರೆ...

ನವದೆಹಲಿ: ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಎಂಬುದು ಒಂದೇ ನಾಣ್ಯದ ಎರಡು ಮುಖವಿದ್ದಂತೆ ಎಂದು ಕೇಂದ್ರ ಸಂಸದೀಯ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಭಾನುವಾರ ಹೇಳಿದ್ದಾರೆ.

ನೋಟು ನಿಷೇಧ ಕುರಿತಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಿ ಮೋದಿಯವರ ವಿರುದ್ಧ ವಾಗ್ಧಾಲಿ ನಡೆಸುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ಹಾಗೂ ಭ್ರಷ್ಟಾಚಾರ ಎಂಬುದು ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಒಬ್ಬರ ನಂತರ ಒಬ್ಬರಂತೆ ಕಾಂಗ್ರೆಸ್ ನಲ್ಲಿರುವ ನಾಯಕರು ಸಾಕ್ಷಿ ಸಮೇತರಾಗಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ. ಮತ್ತೊಂದೆ ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಮೊದಲು ರಾಹುಲ್ ಗಾಂಧಿಯವರು ಈ ವಿಚಾರದ ಬಗ್ಗೆ ಆಲೋಚನೆ ನಡೆಸಬೇಕಿದೆ ಎಂದು ಹೇಳಿದ್ದಾರೆ.

ನಿನ್ನೆಯಷ್ಟೇ ಬೆಳಗಾವಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿಯವರು ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ದೇಶದಲ್ಲಿ ಈಗಾಗಲೇ ಮಾನವ ನಿರ್ಮಿತ ದುರಂತಗಳಿವೆ. ಇದೇ ರೀತಿಯಲ್ಲಿಯೇ ನೋಟಿನ ಮೇಲೆ ನಿಷೇಧ ಹೇರುವ ಮೂಲಕ ಪ್ರಧಾನಿ ಮೋದಿಯವರು ದೊಡ್ಡ ದುರಂತವನ್ನು ಸೃಷ್ಟಿಸಿದ್ದಾರೆಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್