ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್: ಕೈಯಲ್ಲಿ ಕಾಸಿಲ್ಲದೆ ತಾಳ್ಮೆ ಕಳೆದುಕೊಂಡ ಜನ; ಬ್ಯಾಂಕ್‍ ಮೇಲೆ ದಾಳಿ

500 ಹಾಗೂ 1000 ರುಪಾಯಿ ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದ ನಂತರ ಕೈಯಲ್ಲಿ ಕಾಸಿಲ್ಲದೆ ತಾಳ್ಮೆ ಕಳೆದುಕೊಂಡ ಜನ...

ಅಹಮದಾಬಾದ್: 500 ಹಾಗೂ 1000 ರುಪಾಯಿ ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದ ನಂತರ ಕೈಯಲ್ಲಿ ಕಾಸಿಲ್ಲದೆ ತಾಳ್ಮೆ ಕಳೆದುಕೊಂಡ ಜನ ಬ್ಯಾಂಕ್ ಮೇಲೆ ದಾಳಿ ನಡೆಸಿದ ಘಟನೆ ಗುಜರಾತ್‍ನ ಎರಡು ಜಿಲ್ಲೆಗಳಲ್ಲಿ ನಡೆದಿದೆ ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ದೇನಾ ಬ್ಯಾಂಕ್ ಶಾಖೆಗಳ ಮೇಲೆ ಅಲ್ಲಿನ ನಾಗರಿಕರು ದಾಳಿ ನಡೆಸಿದ್ದು, ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದ ಜನರು ಬ್ಯಾಂಕ್‍ನಲ್ಲಿ ದುಡ್ಡಿಲ್ಲ ಎಂದು ಹೇಳಿದಾಗ ಆಕ್ರೋಶಗೊಂಡು ಬ್ಯಾಂಕ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಬ್ಯಾಂಕ್ ನ ಕಿಟಕಿ ಹಾಗೂ ಬಾಗಿಲುಗಳನ್ನು ದ್ವಂಸಗೊಳಿಸಲಾಗಿದೆ. ದಾಳಿ ನಡೆಸಿದವರಲ್ಲಿ ಹೆಚ್ಚಿನವರು ರೈತರಾಗಿದ್ದಾರೆ ಎನ್ನಲಾಗಿದೆ.
ಇನ್ನು ಶನಿವಾರ ಸುರೇಂದ್ರ ನಗರ ಜಿಲ್ಲೆಯಲ್ಲಿ ಬ್ಯಾಂಕ್  ಮುಚ್ಚಿದ್ದಕ್ಕೆ ಕೋಪಗೊಂಡ ನಾಗರಿಕರು ಬ್ಯಾಂಕ್ ಮೇಲೆ ದಾಳಿ ನಡೆಸಿ ಬ್ಯಾಂಕ್‍ನ ಕಿಟಕಿ, ಬಾಗಿಲುಗಳನ್ನು ಮುರಿದಿದ್ದಾರೆ.
ಬ್ಯಾಂಕ್‍ನಲ್ಲಿ ನಗದು ಇಲ್ಲದೇ ಇರುವ ಕಾರಣ ಬ್ಯಾಂಕ್ ಕಾರ್ಯವೆಸಗುತ್ತಿಲ್ಲ. ಆದ್ದರಿಂದ ಮೂರು ದಿನಗಳ ಕಾಲ ಬ್ಯಾಂಕ್ ಮುಚ್ಚಲಾಗಿತ್ತು ಎಂದು ಬ್ಯಾಂಕ್ ಅಧಿಕಾರಿಗಳು ಹೇಳಿದ್ದಾರೆ.
ಕೇಂದ್ರಾಡಳಿತ ಪ್ರದೇಶಗಳಾದ ದಾದ್ರಾ ಮತ್ತು ನಾಗರ್ ಹವೇಲಿಯ ರಾಜಧಾನಿಯಾದ ಸಿಲ್ವಸ್ಸಾದಲ್ಲಿ ಬ್ಯಾಂಕ್ ನಲ್ಲಿ ನಗದು ಇಲ್ಲ ಎಂದು ಹೇಳಿದ ಬ್ಯಾಂಕ್ ಅಧಿಕಾರಿಗಳ ಮೇಲೆ ಜನರು ರೊಚ್ಚಿಗೆದ್ದು ದಾಂಧಲೆ ನಡೆಸಿದ್ದರು. ಪೊಲೀಸರ ಮಧ್ಯಪ್ರವೇಶಿಸಿ ಬ್ಯಾಂಕ್ ಅಧಿಕಾರಿಗಳನ್ನು ರಕ್ಷಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?