ಅಸಾವುದ್ದೀನ್ ಓವೈಸಿ 
ದೇಶ

ಮುಸ್ಲಿಮೇತರ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಎನ್ಐಎ ತನಿಖೆ ವಿಳಂಬ: ಅಸಾವುದ್ದೀನ್ ಒವೈಸಿ

ಸಂಸದ ಅಸಾವುದ್ದೀನ್ ಓವೈಸಿ ಮುಸ್ಲಿಮೇತರ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಎನ್ಐಎ ತನಿಖೆ ವಿಳಂಬವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ದಿಲ್ ಸುಖ್ ನಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ಯಾಸೀನ್ ಭಟ್ಕಳ್ ಸೇರಿ ಐವರಿಗೆ ಕೋರ್ಟ್ ಗಲ್ಲು ಶಿಕ್ಷೆ ಪ್ರಕಟಿಸಿದ ಬೆನ್ನಲ್ಲೇ ಸಂಸದ ಅಸಾವುದ್ದೀನ್ ಓವೈಸಿ ಮುಸ್ಲಿಮೇತರ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಎನ್ಐಎ ತನಿಖೆ ವಿಳಂಬವಾಗುತ್ತಿದೆ ಎಂದು ಆರೋಪಿಸಿದ್ದಾರೆ. 
ಸರಣಿ ಟ್ವೀಟ್ ಮಾಡಿರುವ ಅಸಾವುದ್ದೀನ್ ಓವೈಸಿ, 2013ರ ದಿಲ್ ಸುಖ್ ನಗರ ಸ್ಫೋಟ ಪ್ರಕರಣ ಆರೋಪಿಗಳಿನ್ನು ಅಪರಾಧಿಗಳನ್ನಾಗಿ ಘೋಷಿಸಲಾಗುತ್ತದೆ. ಮೆಕ್ಕಾ ಮಸ್ಜೀದ್ ಸ್ಫೋಟ, ಅಜ್ಮೀರ್ ದರ್ಗಾ ಸ್ಫೋಟ, ಮಾಲೇಗಾಂವ್ ಸ್ಫೋಟ ಪ್ರಕರಣಗಳಲ್ಲಿ ಎನ್ಐಎ ಅಪರಾಧಿಗಳನ್ನು ಘೋಷಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. 
ದಿಲ್ ಸುಖ್ ನಗರ ಸ್ಫೋಟ ಪ್ರಕರಣದಲ್ಲಿ ತೋರಿದ ಪ್ರಗತಿ, ಅವಸರವನ್ನು ಅಜ್ಮೀರ್ ದರ್ಗಾ ಸ್ಫೋಟ, ಮಾಲೇಗಾಂವ್ ಸ್ಫೋಟ, ಬಾಬ್ರಿ ಮಸೀದಿ ಧ್ವಂಸ ಪ್ರಕರಣಗಳಲ್ಲಿ ಏಕೆ ತೋರುವುದಿಲ್ಲ, ದಿಲ್ ಸಿಖ್ ನಗರ ಸ್ಫೋಟ ಪ್ರಕರಣದ ಆರೋಪಿಗಳಿಗೆ 3 ವರ್ಷಗಳಲ್ಲಿ ಶಿಕ್ಷೆ ಪ್ರಕಟವಾಗುತ್ತದೆ. ಆದರೆ ಮುಸ್ಲಿಮೇತರ ಪ್ರಕರಣಗಳ ಇತ್ಯರ್ಥ ವಿಳಂಬವಾಗುತ್ತಿವೆ ಎಲ್ಲಾ ಅಪರಾಧಿಗಳನ್ನು ನಿರಪರಾಧಿಗಳೆಂದು ಘೋಷಿಸಿದರೂ ಅಚ್ಚರಿ ಇಲ್ಲ ಎಂದು ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!