ದೇಶ

ರ್ಯಾಗಿಂಗ್: ಕೇರಳದ ಮಲಪ್ಪುರಂನಲ್ಲಿ 21 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು

Lingaraj Badiger
ಮಲಪ್ಪುರಂ(ಕೇರಳ): ಇಲ್ಲಿನ ಮಂಜೇರಿಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕೆಳ ತರಗತಿಯ ವಿದ್ಯಾರ್ಥಿಗಳನ್ನು ರ್ಯಾಗಿಂಗ್ ಮಾಡಿದ್ದಕ್ಕಾಗಿ 21 ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಕಾಲೇಜು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಥಮ ವರ್ಷದ ಎಂಬಿಬಿಎಸ್ ತರಗತಿಯ ಸುಮಾರು 40 ವಿದ್ಯಾರ್ಥಿಗಳು ಒಟ್ಟಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜಿನ ಆಡಳಿತ ವರ್ಗ ದ್ವಿತೀಯ ಮತ್ತು ತೃತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ.
ತಮ್ಮನ್ನು ನಗ್ನಗೊಳಿಸಿ ಕಾಲೇಜು ಹಾಸ್ಟೆಲ್ ನ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಹಿರಿಯ ವಿದ್ಯಾರ್ಥಿಗಳು ಒತ್ತಾಯಿಸಿದರು. ಮತ್ತು ಮಲಿನ ನೀರನ್ನು ಒತ್ತಡಪೂರ್ವಕವಾಗಿ ಕುಡಿಸಿದರು ಎಂದು ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ದೂರಿನಲ್ಲಿ ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿ ತನಿಖೆ ನಡೆಸಲು ಮೂವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ನೇಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖಾ ಸಮಿತಿ ವರದಿ ಸಲ್ಲಿಸಿದ ನಂತರ ಕಾಲೇಜಿನ ರ್ಯಾಗಿಂಗ್ ವಿರೋಧಿ ಸಮಿತಿ ಮುಂದಿನ ಕ್ರಮ ಕೈಗೊಳ್ಳಲಿದೆ.
ಕೆಲ ದಿನಗಳ ಹಿಂದೆ ಕೊಟ್ಟಾಯಂ ಜಿಲ್ಲೆಯಲ್ಲಿ ಪಾಲಿಟೆಕ್ನಿಕ್ ಕಾಲೇಜಿನ ಹಾಸ್ಟೆಲ್ ನಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್ ಮಾಡಿ ಸಿಕ್ಕಿಬಿದ್ದಿದ್ದರು ಮತ್ತು ಅವರನ್ನು ನಟ್ಟಕೊಮ್ ನ ಕಾಲೇಜಿನಿಂದ ಅಮಾನತು ಮಾಡಲಾಗಿತ್ತು. 
SCROLL FOR NEXT