ತಮಿಳುನಾಡು ಮುಖ್ಯ ಕಾರ್ಯದರ್ಶಿ ಪಿ.ರಾಮ ಮೋಹನ್ ರಾವ್
ಚೆನ್ನೈ: ತಮಿಳುನಾಡಿನ ರಾಜಕೀಯ ನಾಯಕರಿಗೆ ಆಘಾತ ಹುಟ್ಟಿಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಬೆಳಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ನಿವಾಸದ ಮೇಲೆ ದಾಳಿ ನಡೆಸಿದರು.
ರಾಜ್ಯ ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರ ಅಧಿಕಾರಿಗಳ ನಿವಾಸಗಳ ಮೇಲೆ ಸೇರಿದಂತೆ 10 ಕಡೆಗಳಲ್ಲಿ ಐಟಿ ಅಧಿಕಾರಿಗಳ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಪರಿಸರ ಇಲಾಖೆ ಅಧಿಕಾರಿಗಳು ಮರಳು ಗಣಿ ಅನುಮತಿಗೆ ಪಡೆಯುವಲ್ಲಿ ಕಾರ್ಯನಿರತರಾಗಿದ್ದಾರೆ.
ತಮಿಳುನಾಡು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರಾಮ ಮೋಹನ್ ರಾವ್ ಅವರ ಅಣ್ಣಾ ನಗರ ನಿವಾಸದ ಮೇಲೆ ಇಂದು ನಸುಕಿನ ಜಾವ ದಾಳಿ ನಡೆಸಿದ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ. ಇತರ 7 ಕಡೆಗಳಲ್ಲಿ ಇಂತಹದ್ದೇ ಕಾರ್ಯಾಚರಣೆ ಮುಂದುವರಿದಿದೆ.
ಪ್ರಭಾವಿ ಮರಳು ಗಣಿಗಾರಿಕೆ ಉದ್ಯಮಿ ಶೇಖರ್ ರೆಡ್ಡಿ ಅವರಿಂದ ಇತ್ತೀಚೆಗೆ 130 ಕೋಟಿ ರೂಪಾಯಿ ಅಘೋಷಿತ ಹಣ ಮತ್ತು 2,000 ರೂಪಾಯಿಗಳ ಹೊಸ ನೋಟು, 171 ಕೆಜಿ ಚಿನ್ನ ಇತ್ತೀಚೆಗೆ ದಾಳಿ ನಡೆಸಿದ ಸಂದರ್ಭದಲ್ಲಿ ಐಟಿ ಇಲಾಖೆ ಅಧಿಕಾರಿಗಳಿಗೆ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ನಿವಾಸಕ್ಕೆ ತೆರಳಿ ತನಿಖೆ ನಡೆಸುತ್ತಿರಬಹುದು ಎನ್ನಲಾಗುತ್ತಿದೆ.
ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ರೆಡ್ಡಿ ಮತ್ತು ಅವರ ಇಬ್ಬರು ಸಹಚರರ ವಿರುದ್ಧ ಕೇಸು ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics