ಕೊಲೆ ಪ್ರಕರಣ ಸಂಬಂಧ ಜೆಡಿಯು ಎಂಎಲ್‌ಸಿ ಪುತ್ರನ ವಿರುದ್ಧ ಪ್ರಕರಣ ದಾಖಲು
ಕೊಲೆ ಪ್ರಕರಣ ಸಂಬಂಧ ಜೆಡಿಯು ವಿಧಾನಪರಿಷತ್ ಸದಸ್ಯ ದಿನೇಶ್ ಸಿಂಗ್ ಪುತ್ರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮುಜಾಫರನಗರ: ಕೊಲೆ ಪ್ರಕರಣ ಸಂಬಂಧ ಜೆಡಿಯು ವಿಧಾನಪರಿಷತ್ ಸದಸ್ಯ ದಿನೇಶ್ ಸಿಂಗ್ ಪುತ್ರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಬಿಹಾರದ ಮುಜಾಫರನಗರದ ಫತೇಪುರ್ ಗ್ರಾಮದ ವ್ಯಕ್ತಿಯೊರ್ವನನ್ನು ಹತ್ಯೆ ಮಾಡಿದ ಆರೋಪದ ಮೇಲೆ ಜೆಡಿಯು ಎಂಎಲ್ಸಿ ದಿನೇಶ್ ಪುತ್ರ ಚೋಟು ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ಅಧೀಕ್ಷಕ ಅಜಯ್ ಕುಮಾರ್ ಹೇಳಿದ್ದಾರೆ.
ಕಾಂಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹತ್ಯೆಗೊಳಗಾದ ಸುರೇಶ್ ಶಾಹ ದೇಹವನ್ನು ಪೊಲೀಸರು ಇಂದು ಬೆಳಗ್ಗೆ ವಶಪಡಿಸಿಕೊಂಡಿದ್ದರು. ಹತ್ಯೆ ಸಂಬಂಧ ಮೃತನ ಪತ್ನಿ ಹೇಳಿಕೆ ನೀಡಿದ್ದು ಚೋಟ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.
ಕಳೆದ ರಾತ್ರಿ ಚೋಟು ಸಿಂಗ್ ಬಲವಂತವಾಗಿ ಮನೆಯಿಂದ ಪತಿಯನ್ನು ಕರೆದುಕೊಂಡು ಹೋಗಿದ್ದರು. ಆ ಬಳಿಕ ಅವರ ಹತ್ಯೆಯಾಗಿದ್ದು ಇದಕ್ಕೆ ಚೋಟು ಸಿಂಗ್ ಕಾರಣ. ಅಲ್ಲದೆ ಚೋಟು ಸಿಂಗ್ ಅಕ್ರಮ ಮದ್ಯ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ಸುರೇಶ್ ಪತ್ನಿ ಆರೋಪಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.