ಪ್ರಧಾನಿ ಮೋದಿ ಗಂಗಾ ನದಿಯಷ್ಟೇ ಪವಿತ್ರ: ರಾಹುಲ್ ಆರೋಪಕ್ಕೆ ಬಿಜೆಪಿ ತಿರುಗೇಟು
ಪ್ರಧಾನಿ ನರೇಂದ್ರ ಮೋದಿ ಅವರು ಗಂಗಾ ನದಿಯಷ್ಟೇ ಪವಿತ್ರರು ಎಂದು ಬಿಜೆಪಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಕ್ಕೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗಂಗಾ ನದಿಯಷ್ಟೇ ಪವಿತ್ರರು ಎಂದು ಬಿಜೆಪಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಕ್ಕೆ ಬಿಜೆಪಿ ಬುಧವಾರ ತಿರುಗೇಟು ನೀಡಿದೆ.
ಮೋದಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಸಹರಾದಿಂದ 40 ಕೋಟಿ ರುಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ ನಂತರ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಪ್ರಧಾನಿ ವಿರುದ್ಧದ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ಕಾಂಗ್ರೆಸ್ ನಿರಂತರವಾಗಿ ಚುನಾವಣೆಗಳಲ್ಲಿ ಸೋಲುತ್ತಿರುವುದರಿಂದ ರಾಹುಲ್ ಗಾಂಧಿ ಹತಾಶರಾಗಿರುವುದರಿಂದ ಪ್ರಧಾನಿ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದು ರವಿಶಂಕರ್ ಪ್ರಸಾದ್ ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿ ಅವರು ತಮ್ಮ ಕುಟುಂಬ ವರ್ಗದವರನ್ನು ಸುತ್ತಿಕೊಳ್ಳುತ್ತಿರುವ ಅಗಸ್ಟಾ ವೆಸ್ಟ್ಲ್ಯಾಂಡ್ ಹಗರಣದ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಕನಿಷ್ಠ ನಗರಸಭೆಗಳಲ್ಲಿ ಅಧಿಕಾರ ನಡೆಸಲು ಕಾಂಗ್ರೆಸ್ನಿಂದ ಸಾಧ್ಯವಿಲ್ಲ ಎಂದು ಜನರು ನಿರ್ಧರಿಸಿದ್ದಾರೆ. ಹಾಗಾಗಿ ನಿರಂತರವಾಗಿ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲುತ್ತಿದೆ ಎಂದರು. ಅಲ್ಲದೆ ರಾಹುಲ್ ಗಾಂಧಿ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಮತ್ತೊಮ್ಮೆ ಸ್ಮರಿಸಿಕೊಳ್ಳುವುದು ಒಳಿತು ಎಂದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.