ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ 
ದೇಶ

ಮೋದಿ ವಿರುದ್ದ ಲಂಚ ಆರೋಪ: ರಾಹುಲ್ ಬೆನ್ನಿಗೆ ನಿಂತ ಲಾಲು ಪ್ರಸಾದ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿರುದ್ಧ ಲಂಚ ಆರೋಪ ಮಾಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಬೆಂಬಲಕ್ಕೆ ಗುರುವಾರ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್...

ಪಾಟ್ನ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿರುದ್ಧ ಲಂಚ ಆರೋಪ ಮಾಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಬೆಂಬಲಕ್ಕೆ ಗುರುವಾರ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಬಂದಿದ್ದಾರೆ.

ಗುಜರಾತ್ ರಾಜ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮೋದಿಯವರು ಸಹರಾ ಕಂಪನಿಯಿಂದ ರು.40 ಕೋಟಿ ಹಣವನ್ನು ಪಡೆದುಕೊಂಡಿದ್ದರೆಂಬ ರಾಹುಲ್ ಗಾಂಧಿಯವರ ಗಂಭೀರ ಆರೋಪ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಲಾಲೂ ಪ್ರಸಾದ್ ಯಾದವ್ ಅವರು, ಪ್ರಧಾನಿ ಮೋದಿಯವರು ಇದೀಗ ಸಂಪೂರ್ಣವಾಗಿ ಸಿಕ್ಕಿಹಾಕಿಕೊಂಡಿದ್ದಾರೆ. ಆರೋಪ ಕುರಿತಂತೆ ಮೋದಿಯವರು ಸ್ಪಷ್ಟನೆ ನೀಡಲೇಬೇಕಿದೆ. ಮೋದಿಯವರ ಪರವಾಗಿ ಬಿಜೆಪಿ ವಕ್ತಾರರು ಬಂದಿದ್ದೇ ಆದರೆ, ಅದು ಸರಿಯಿರುವುದಿಲ್ಲ ಎಂದು ಹೇಳಿದ್ದಾರೆ.

ಸಾಕ್ಷ್ಯಾಧಾರವಿಲ್ಲದೆಯೇ ರಾಹುಲ್ ಗಾಂಧಿಯವರು ಮೋದಿ ವಿರುದ್ಧ ಇಂತಹ ಗಂಭೀರವಾದ ಆರೋಪವನ್ನು ಮಾಡಲು ಸಾಧ್ಯವಿಲ್ಲ. ಯಾವುದೇ ನಾಯಕರು ಪ್ರಧಾನಿಮಂತ್ರಿಗಳ ವಿರುದ್ಧ ಈ ರೀತಿಯಾಗಿ ಆರೋಪ ಮಾಡಲು ಸಾಧ್ಯವಿಲ್ಲ. ರಾಹುಲ್ ಮಾಡಿದ್ದಾರೆಂದರೆ ಮೋದಿಯವರು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿರಬೇಕು. ಹೀಗಾಗಿ ಸುಪ್ರೀಂಕೋರ್ಟ್ ಕೂಡಲೇ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕಿದೆ ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!