ದೇಶ

ಚೆನ್ನೈ: ವಿಮಾನ ನಿಲ್ದಾಣದಲ್ಲಿ 1.34 ಕೋಟಿ ರೂ ಮೌಲ್ಯದ ಹೊಸ ನೋಟುಗಳು ವಶಕ್ಕೆ

ಚೆನ್ನೈ ವಿಮಾನ ನಿಲ್ದಾಣದಲ್ಲಿ ಡಿ.22 ರಂದು 1.34 ಕೋಟಿ ರೂ ಮೌಲ್ಯದ 2000 ರೂ ಮುಖಬೆಲೆಯ ಹೊಸ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚೆನ್ನೈ: 200 ರೂ ಮುಖಬೆಲೆಯ ನೋಟುಗಳನ್ನು ಅಕ್ರಮವಾಗಿ ಸಂಗ್ರಹಿಸಿ, ವರ್ಗಾವಣೆ ಮಾಡಲಾಗುತ್ತಿರುವ ಪ್ರಕರಣಗಳು ಮತ್ತಷ್ಟು ಬಯಲಿಗೆ ಬರುತ್ತಿದ್ದು, ಚೆನ್ನೈ ವಿಮಾನ ನಿಲ್ದಾಣದಲ್ಲಿ ಡಿ.22 ರಂದು 1.34 ಕೋಟಿ ರೂ ಮೌಲ್ಯದ 2000 ರೂ ಮುಖಬೆಲೆಯ ಹೊಸ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. 
ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು 1.34 ಕೋಟಿ ರೂ ಮೌಲ್ಯದ ಹಣವನ್ನು ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದ್ದು ವಿಚಾರಣೆ ಮುಂದುವರೆದಿದೆ. 
ಗರಿಷ್ಠ ಮುಖಬೆಲೆಯ ನೋಟುಗಳನ್ನು ಅಕ್ರಮವಾಗಿ ಬದಲಾವಣೆ ಮಾಡುತ್ತಿರುವ ಪ್ರಕರಣಗಳು ಪ್ರತಿದಿನವೂ ಬಹಿರಂಗವಾಗುತ್ತಿದ್ದು, ಇಂತಹದ್ದೇ ಪ್ರಕರಣದಲ್ಲಿ 25 ಕೋಟಿ ಮೌಲ್ಯದ ಹಳೇಯ ನೋಟುಗಳನ್ನು ಹೊಸ ನೋಟುಗಳಿಗೆ ಬದಲಾಯಿಸಲು ಯತ್ನಿಸುತ್ತಿದ್ದ ಪರಸ್ಮಲ್ ಲೋಧಾ ಎಂಬ ಉದ್ಯಮಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಡಿ.22 ರಂದು ಬಂಧಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT