ಅಸ್ಸಾಂನಲ್ಲಿ ಐಟಿ ದಾಳಿ, 2.35 ಕೋಟಿ ರು. ಹೊಸ ನೋಟ್ ಜಪ್ತಿ
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ಅಸ್ಸಾಂ ಇಬ್ಬರು ಉದ್ಯಮಿಗಳ ಮನೆ ದಾಳಿ ನಡೆಸಿದ್ದು, ದಾಳಿಯ ವೇಳೆ 2.35 ಕೋಟಿ...
ಗುವಾಹತಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ಅಸ್ಸಾಂ ಇಬ್ಬರು ಉದ್ಯಮಿಗಳ ಮನೆ ದಾಳಿ ನಡೆಸಿದ್ದು, ದಾಳಿಯ ವೇಳೆ 2.35 ಕೋಟಿ ರುಪಾಯಿ ಹೊಸ ನೋಟ್ ಗಳನ್ನು ಜಪ್ತಿ ಮಾಡಿದ್ದು, ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿದ ನಂತರ ಅಸ್ಸಾಂನಲ್ಲಿ ನಡೆದ ಅತಿ ದೊಡ್ಡ ದಾಳಿ ಇದಾಗಿದೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಆಧರಿಸಿ, ನಗೋಣ್ ಜಿಲ್ಲೆಯ ನಗೋಣ್ ಬಾರಬಜಾರ್ ನ ಉದ್ಯಮಿಗಳ ಮೇಲೆ ದಾಳಿ ನಡೆಸಿದೆ ಎಂದು ಆದಾಯ ತೆರಿಗೆ ಇಲಾಖೆಯ ಮೂಲಗಳು ತಿಳಿಸಿವೆ.
ದಾಳಿಯ ವೇಳೆ 2.29 ಕೋಟಿ ರುಪಾಯಿ 2000 ಮುಖಬೆಲೆಯ ನೋಟ್ ಗಳು ಹಾಗೂ ಒಂದು ಲಕ್ಷ ರುಪಾಯಿ ಹೊಸ 500 ರುಪಾಯಿ ನೋಟ್ ಗಳು ಪತ್ತೆಯಾಗಿವೆ.
ಉದ್ಯಮಿಗಳಾದ ಅಮುಲ್ಯ ದಾಸ್ ಹಾಗೂ ತಪನ್ ದಾಸ್ ಅವರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.