ನವದೆಹಲಿ: ರಹಸ್ಯ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಡಿಸೆಂಬರ್ 26ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಉತ್ತರಾಖಂಡ್ ಮುಖ್ಯಮಂತ್ರಿ ಹರಿಶ್ ರಾವತ್ ಅವರಿಗೆ ಮತ್ತೆ ಸಮನ್ಸ್ ನೀಡಿದೆ.
ಏಳು ತಿಂಗಳ ಹಿಂದೆ ರಹಸ್ಯ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಿಬಿಐ ಇಂದು ಎರಡನೇ ಬಾರಿ ಉತ್ತರಾಖಂಡ್ ಮುಖ್ಯಮಂತ್ರಿಗೆ ಸಮನ್ಸ್ ಜಾರಿ ಮಾಡಿದೆ. ಹರಿಶ್ ರಾವತ್ ಅವರು ಈ ಹಿಂದೆ ಮೇ 24ರಂದು ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಸುಮಾರು 5 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು.
ಉತ್ತರಾಖಂಡ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವ ಮುನ್ನ ಹರಿಶ್ ರಾವತ್ ಅವರು ಬಂಡಾಯ ಕಾಂಗ್ರೆಸ್ ಶಾಸಕರ ಖರೀದಿಗೆ ಮುಂದಾಗಿರುವುದು ರಹಸ್ಯ ಕಾರ್ಯಾಚರಣೆಯ ಸಿಡಿಯಲ್ಲಿ ಬಹಿರಂಗವಾಗಿತ್ತು.