ಅತಿ ಶ್ರೀಮಂತರು ಮತ್ತು ಪ್ರಾಮಾಣಿಕರ ಮಧ್ಯೆ ಅಂತರ ಸೃಷ್ಟಿಸಿದ ಮೋದಿ: ರಾಹುಲ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ನೋಟು ನಿಷೇಧದಿಂದ ಪ್ರಧಾನಿ ಮೋದಿ ಅತಿ ಶ್ರೀಮಂತರು ಮತ್ತು ಪ್ರಾಮಾಣಿಕರ ಮಧ್ಯೆ ಅಂತರ ಸೃಷ್ಟಿಸಿದ್ದಾರೆ...
ಉತ್ತರಾಖಂಡ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ನೋಟು ನಿಷೇಧದಿಂದ ಪ್ರಧಾನಿ ಮೋದಿ ಅತಿ ಶ್ರೀಮಂತರು ಮತ್ತು ಪ್ರಾಮಾಣಿಕರ ಮಧ್ಯೆ ಅಂತರ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಶೇ.1 ರಷ್ಟಿರುವ ಶ್ರೀಮಂತರು, ಶೇ.99 ರಷ್ಟು ಪ್ರಾಮಾಣಿಕರ ನಡುವೆ ಪ್ರಧಾನಿ ನರೇಂದ್ರ ಮೋದಿ ಅಂತರ ಸೃಷ್ಟಿಸಿದ್ದು, ನೋಟು ನಿಷೇಧದ ಮೂಲಕ ಕೇಂದ್ರ ಸರ್ಕಾರ ಆರ್ಥಿಕ ಸುಲಿಗೆಗೆ ಮುಂದಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಅಲ್ಮೋರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ರಾಹುಲ್ ಗಾಂಧಿ, ನೋಟು ನಿಷೇಧದ ನಂತರ ಕಪ್ಪುಹಣ ಹೊಂದಿರುವ ಒಬ್ಬನನ್ನೂ ಸಹ ಬಂಧಿಸಲಾಗಿಲ್ಲ. 50 ಕುಟುಂಬಗಳು ಬ್ಯಾಂಕ್ ನಿಂದ ತೆಗೆದುಕೊಂಡಿರುವ ಸಾಲವನ್ನು ಮನ್ನಾ ಮಾಡಲು ಈ ಯೋಜನೆ ಜಾರಿಗೆ ತರಲಾಗಿದೆ ಎಂದು ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ಆರೋಪ ಮಾಡಿದ್ದು, ಸ್ವಿಸ್ ಬ್ಯಾಂಕ್ ನಲ್ಲಿ ಹಣ ಇಟ್ಟಿರುವವರ ಹೆಸರನ್ನು ಕೇಂದ್ರ ಸರ್ಕಾರ ಸಂಸತ್ ನಲ್ಲಿ ಬಿಡುಗಡೆ ಮಾಡಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.