ದೆಹಲಿಯ ನಿರ್ಗಮಿತ ರಾಜ್ಯಪಾಲ ಲೆ. ನಜೀಬ್ ಜಂಗ್ 
ದೇಶ

ನಜೀಬ್ ಜಂಗ್ ಅವರ ರಾಜೀನಾಮೆ ವೈಯಕ್ತಿಕ, ಆಪ್ ಕೇಂದ್ರ ಸರ್ಕಾರವನ್ನೇಕೆ ಪ್ರಶ್ನಿಸಬೇಕು?: ಕಿರಣ್ ರಿಜಿಜು

ದೆಹಲಿ ಸರ್ಕಾರದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ ನಜೀಬ್ ಜಂಗ್ ಅವರ...

ನವದೆಹಲಿ: ದೆಹಲಿ ಸರ್ಕಾರದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ ನಜೀಬ್ ಜಂಗ್ ಅವರ ನಿರ್ಗಮನವನ್ನು ಪ್ರಶ್ನಿಸಿದ ಆಮ್ ಆದ್ಮಿ ಪಕ್ಷವನ್ನು ಕೇಂದ್ರ ಸರ್ಕಾರ ದೂಷಿಸಿದೆ.
ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಕಿರಣ್ ರಿಜಿಜು, ಇದು ಜಂಗ್ ಅವರ ವೈಯಕ್ತಿಕ ನಿರ್ಧಾರ ಎಂದು ಹೇಳಿದ್ದಾರೆ. ದೆಹಲಿ ರಾಜ್ಯಪಾಲ ಹುದ್ದೆಯಿಂದ ನಿರ್ಗಮಿಸಲು ಕಾರಣವೇನೆಂಬುದನ್ನು ಹೇಳಲು ಅವರು ನಿರಾಕರಿಸಿದ್ದಾರೆ.
ಸುದ್ದಿಗಾರರು ಅವರನ್ನು ಈ ಬಗ್ಗೆ ಪ್ರಶ್ನಿಸಿದಾಗ, ದಯಮಾಡಿ ನೀವು ನಜೀಬ್ ಅವರನ್ನೇ ಕೇಳಿ. ಅವರು ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಮತ್ತು ಈ ಬಗ್ಗೆ ಯಾವುದೇ ಸ್ಪಷ್ಟೀಕರಣ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.
ಈ ವಿಷಯವನ್ನು ಆಮ್ ಆದ್ಮಿ ಪಕ್ಷ  ಎತ್ತಿರುವುದಕ್ಕೆ ಕೂಡ ಅವರು ಆಕ್ಷೇಪ ವ್ಯಕ್ತಪಡಿಸಿದರು. ಆಪ್ ಈ  ಬಗ್ಗೆ ಕೇಂದ್ರ ಸರ್ಕಾರವನ್ನು ಏಕೆ ಪ್ರಶ್ನಿಸುತ್ತಿದೆ ಎಂದು ಗೊತ್ತಾಗುತ್ತಿಲ್ಲ ಎಂದರು.
ರಾಹುಲ್ ಗಾಂಧಿ ವಿರುದ್ಧ ಕೂಡ ವಾಗ್ದಾಳಿ ನಡೆಸಿದ ಅವರು, ಅವರು ಪ್ರಶ್ನೋತ್ತರ ಏಕೆ ನಡೆಸಬೇಕು? ರಾಹುಲ್ ಗಾಂಧಿಯವರ ಆರೋಪಗಳನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್