ನವದೆಹಲಿ: ಕಪ್ಪುಹಣದ ವಿರುದ್ಧ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಶುಕ್ರವಾರ ಬೆಳಗ್ಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು 58 ಲಕ್ಷ ರು.ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನೈಜಿರಿಯಾ ಮೂಲದ ಪ್ರಯಾಣಿಕ ದೆಹಲಿಯಿಂದ ತಮಿಳುನಾಡಿನ ಕೊಯಮತ್ತೂರಿಗೆ ಪ್ರಯಾಣಿಸಲು ಆಗಮಿಸಿದ್ದ ವೇಳೆ ಅಧಿಕಾರಿಗಳು ಇವರಿಂದ 58 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕನ ಬಳಿ ಹಣದ ಬಗ್ಗೆ ಖಚಿತ ದಾಖಲೆಗಳು ಪತ್ತೆಯಾಗದ ಹಿನ್ನಲೆಯಲ್ಲಿ ಸಿಐಎಸ್ ಎಫ್ ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದಿದ್ದಾರೆ. 58.07 ಲಕ್ಷ ಹಣದ ಪೈಕಿ 53.78 ಲಕ್ಷ ಹಣ ಹೊಸ 500 ಮತ್ತು 2000 ಸಾವಿರ ರು. ನೋಟುಗಳಲ್ಲಿ ಪತ್ತೆಯಾಗಿದ್ದು, ಉಳಿದ 4.29 ಲಕ್ಷ ಹಣ ಹಳೆಯ ನಿಷೇಧಿತ 500 ಮತ್ತು 1000 ರು. ನೋಟುಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತುತ ಪ್ರಯಾಣಿಕವನನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.