ಮುಂಬೈ: ಮುಂಬೈನ ಪೊವೈ ಕೆರೆಯಲ್ಲಿ ದೋಣಿಯೊಂದು ಮುಗುಚಿ ಬಿದ್ದಿದ್ದು, ಮೂವರು ನಾಪತ್ತೆಯಾಗಿರುವುದಾಗಿ ಶನಿವಾರ ತಿಳಿದುಬಂದಿದೆ.
ಕಳೆದ ರಾತ್ರಿ 11.30ರ ಸುಮಾರಿಗೆ ಘೋಟಕ್ಪಾರ್ ಪ್ರದೇಶದ ನಿವಾಸಿಗಳಾಗಿರುವ 8 ಮಂದಿ ದೋಣಿಯಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ದೋಣಿ ಮುಗುಚಿ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಈವರೆಗೂ ಐವರನ್ನು ರಕ್ಷಣೆ ಮಾಡಿದ್ದಾರೆ. ಇನ್ನೂ ಮೂವರು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದ್ದು, ನಾಪತ್ತೆಯಾಗಿರುವವರಿಗಾಗಿ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.