ದೆಹಲಿಯಲ್ಲಿ ದಟ್ಟಮಂಜು: 52 ರೈಲುಗಳ ಸಂಚಾರ ವಿಳಂಬ
ರಾಜಧಾನಿ ದೆಹಲಿಯಲ್ಲಿ ದಟ್ಟ ಮಂಜು ಕವಿದ ವಾತಾವರಣ ಶನಿವಾರ ಕೂಡ ಮುಂದುವರೆದಿದ್ದು, ವಿಮಾನ ಹಾಗೂ ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿದೆ...
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ದಟ್ಟ ಮಂಜು ಕವಿದ ವಾತಾವರಣ ಶನಿವಾರ ಕೂಡ ಮುಂದುವರೆದಿದ್ದು, ವಿಮಾನ ಹಾಗೂ ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಇಂದು ಬೆಳಿಕ್ಕೆ ಪ್ರಯಾಣ ಆರಂಭಿಸಬೇಕಿದ್ದ 52 ರೈಲುಗಳ ಸಂಚಾರ ವಿಳಂಬವಾಗಲಿದೆ ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಸುಕಿನ ವೇಳೆ ಪ್ರಯಾಣ ಆರಂಭಿಸಬೇಕಿದ್ದ 5 ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದ್ದು, 52 ರೈಲುಗಳು ತಡವಾಗಿ ಪ್ರಯಾಣ ಬೆಳೆಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೈಲುಗಳು ತಡವಾಗಿ ಪ್ರಯಾಣ ಬೆಳೆಸುವುದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದ್ದು, ಸಾವಿರಾರು ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.