ದೇಶ

ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ: ರಾಜನಾಥ ಸಿಂಗ್ ವಿಶ್ವಾಸ

Manjula VN

ನವದೆಹಲಿ: ಉತ್ತರಪ್ರದೇಶದಲ್ಲಿ ಮುಂಬರುವ ಚುನಾವಾಣೆಯಲ್ಲಿ ಖಂಡಿತವಾಗಿಯೂ ಬಿಜೆಪಿ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಶನಿವಾಸ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲಖನೌನಲ್ಲಿ ಆಯೋಜಿಸಲಾಗಿದ್ದ ಪರಿವರ್ತನ್ ರ್ಯಾಲಿಯಲ್ಲಿ ಭಾಗಿಯಾಗುವ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು,  ಪರಿವರ್ತನ್ ರ್ಯಾಲಿ ಮೂಲಕ ಬಿಜೆಪಿ ಉತ್ತರಪ್ರದೇಶದಲ್ಲಿ ಬದಲಾವಣೆ ಎಂಬ ಅಡಿಪಾಯವನ್ನು ಹಾಕುತ್ತಿದೆ. ರಾಜ್ಯದಲ್ಲಿ ಬದಲಾವಣೆ ಬರಲಿದೆ ಎಂಬುದರ ಬಗ್ಗೆ ಇಲ್ಲಿನ ಜನರಿಗೂ ನಂಬಿಕೆಯಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ನೋಟು ನಿಷೇಧ ಕುರಿತಂತೆ ಮಾತನಾಡಿರುವ ಅವರು, ರು.500 ಹಾಗೂ 1,000 ಮುಖಬೆಲೆಯ ದುಬಾರಿ ನೋಟಿನ ಮೇಲೆ ನಿಷೇಧ ಹೇರಿರುವಿಕೆಯನ್ನು ಚುನಾವಣೆ ಆಧಾರದ ಮೇಲೆ ನೋಡಬಾರದು. ನೋಟು ನಿಷೇಧ ನಿರ್ಧಾರ ಚುನಾವಣೆಯ ಗೆಲುವು ಅಥವಾ ಸೋಲಿಗೆ ಸಂಬಂಧಿಸಿದ್ದಲ್ಲ. ದೇಶದ ಹಿತಾಸಕ್ತಿಯನ್ನು ಅಲೋಚಿಸಿ ಸರ್ಕಾರ ನಿರ್ಧಾರವನ್ನು ಕೈಗೊಂಡಿದೆ. ಹೀಗಾಗಿ ನಿರ್ಧಾರ ಚುನಾವಣೆಗೆ ಸಂಬಂಧಿಸಿದ್ದಲ್ಲ ಎಂದು ತಿಳಿಸಿದ್ದಾರೆ.

ನೋಟು ನಿಷೇಧ ನಿರ್ಧಾರ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಸಹಾಯಕವಾಗಿದೆ. ನಿರ್ಧಾರದ ಬಳಿಕ ಸಾಕಷ್ಟು ನಕ್ಸಲರ ಖಾತೆಗಳನ್ನು ವಶಕ್ಕೆ ಪಡೆಯಲಾಗಿದೆ. ನೋಟು ನಿಷೇಧ ನಿರ್ಧಾರ ಭ್ರಷ್ಟಾಚಾರ ಹಾಗೂ ಕಪ್ಪುಹಣ ನಿಯಂತ್ರಣಕ್ಕೆ ಸಹಾಯಕವಾಗಲಿದೆ. ಅಲ್ಲದೆ, ದೇಶದ ಆರ್ಥಿಕ ಶಕ್ತಿಯನ್ನು ಹೆಚ್ಚಿಸಲಿದೆ ಎಂದು ಹೇಳಿದ್ದಾರೆ.

SCROLL FOR NEXT