ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (ಸಂಗ್ರಹ ಚಿತ್ರ)
ನವದೆಹಲಿ: 2013ರ ವಿಧಾನಸಭೆ ಚುನಾವಣೆಗೆ ಮುನ್ನ ಸಲ್ಲಿಸಿದ್ದ ಅಫಿದವಿಟ್ಟಿನಲ್ಲಿ ತಪ್ಪು ಮಾಹಿತಿ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಕೋರ್ಟ್ ಶನಿವಾರ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗೆ ಜಾಮೀನು ಮಂಜೂರು ಮಾಡಿದೆ.
ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಆಶಿಶ್ ಗುಪ್ತಾ ವೈಯಕ್ತಿಕ ಬಾಂಡ್ 10,000 ರೂಪಾಯಿಗಳೊಂದಿಗೆ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕ್ಕೆ ಮುಂದೂಡಲಾಗಿದೆ.
ಕೆಲಸದ ಒತ್ತಡದಿಂದಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಕ್ಕೆ ಕೋರ್ಟ್ ಕೇಜ್ರಿವಾಲ್ ಅವರಿಗೆ ಖುದ್ದು ಹಾಜರಾಗುವುದಕ್ಕೆ ವಿನಾಯಿತಿ ನೀಡಿದೆ.
2013ರ ಚುನಾವಣೆ ವೇಳೆ ಅರವಿಂದ್ ಕೇಜ್ರಿವಾಲ್ ಅವರು ಉದ್ದೇಶಪೂರ್ವಕವಾಗಿ ತಮ್ಮ ಬಗ್ಗೆ ಮಾಹಿತಿಗಳನ್ನು ಮರೆಮಾಚುವ ಮತ್ತು ನಾಶಪಡಿಸುವ ಯತ್ನ ಮಾಡಿದ್ದರು ಎಂದು ಎನ್ ಜಿಒ ಪರವಾಗಿ ನೀರಜ್ ಸಕ್ಸೇನಾ ಮತ್ತು ಅಂಜು ಅಗರ್ ವಾಲ್ ಸಲ್ಲಿಸಿದ್ದ ದೂರನ ಅನ್ವಯ ಕೋರ್ಟ್ ವಿಚಾರಣೆ ನಡೆಸಿತ್ತು.