ನವೀನ್ ಪಟ್ನಾಯಕ್ 
ದೇಶ

ಮಲ್ಕನಗಿರಿಯಲ್ಲಿ ಒಡಿಶಾ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

ಮಲ್ಕನಗಿರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ...

ಭುವನೇಶ್ವರ: ಮಲ್ಕನಗಿರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಶನಿವಾರ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿಸುವ ಮೂಲಕ ಪ್ರತಿಭಟಿಸಿದರು.
ಜಾಪನೀಸ್ ಎನ್‍ಸೆಫಲೈಟೀಸ್ ಎಂಬ ರೋಗಕ್ಕೆ ತುತ್ತಾಗಿ ಸುಮಾರು 100 ಮಕ್ಕಳು ಸಾವನ್ನಪ್ಪಿದರೂ ಜಿಲ್ಲೆಗೆ ತಡವಾಗಿ ಆಗಮಿಸಿದ ಸಿಎಂ ವಿರುದ್ಧ ಬಿಜೆಪಿ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು. ಈ ವೇಳೆ ಕಪ್ಪು ಬಾವುಟ ಪ್ರದರ್ಶಿಸಿದ ಸುಮಾರು 15 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಕಾಂಗ್ರೆಸ್ ಇಂದು ಜಿಲ್ಲಾ ಬಂದ್ ಗೆ ಕರೆ ನೀಡಿದ್ದವು. ಬಂದ್ ನಡುವೆಯೂ ಪಟ್ನಾಯಕ್ ಸಮಾವೇಶದಲ್ಲಿ ಸುಮಾರು 20 ಸಾವಿರ ಮಂದಿ ಭಾಗವಹಿಸಿದ್ದರು ಎನ್ನಲಾಗಿದೆ. ಸಿಎಂ ಸಭೆಗೆ ಪೊಲೀಸ್ ರಕ್ಷಣೆಯಲ್ಲಿ ಜನರನ್ನು ಕರೆತರಲಾಗಿತ್ತು.
ಇದೇ ವೇಳೆ ಸಿಎಂ ನವೀನ್ ಪಟ್ನಾಯಕ್ ಅವರು ಜಾಪನೀಸ್ ಎನ್‍ಸೆಫಲೈಟೀಸ್ ರೋಗಕ್ಕೆ ತುತ್ತಾಗಿ ಸಾವನ್ನಪ್ಪಿದ ಮಕ್ಕಳ ಕುಟುಂಬಕ್ಕೆ ತಲಾ ಮೂರು ಲಕ್ಷ ರುಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!