ಹರೀಶ್ ರಾವತ್ 
ದೇಶ

ಲಂಚಪ್ರಕರಣ: ಸಿಎಂ ಹರೀಶ್ ರಾವತ್ ಸಿಬಿಐ ಮುಂದೆ ಹಾಜರಾಗಬೇಕಿಲ್ಲ

ಲಂಚ ಪ್ರಕರಣದ ಸ್ಟಿಂಗ್ ಆಪರೇಷನ್ ನಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಹರೀಶ್ ರಾವತ್ ಸಿಬಿಐ ಮುಂದೆ ...

ನವದೆಹಲಿ: ಲಂಚ ಪ್ರಕರಣದ ಸ್ಟಿಂಗ್ ಆಪರೇಷನ್ ನಲ್ಲಿ  ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಹರೀಶ್ ರಾವತ್ ಸಿಬಿಐ  ಮುಂದೆ ಹಾಜರಾಗುವುದಕ್ಕೆ ಉತ್ತರಾಖಂಡ ಹೈಕೋರ್ಟ್ ತಡೆ ನೀಡಿದೆ.

ಸಿಬಿಐ ಮುಂದೆ ಖುದ್ದು ಹಾಜರಾತಿಯಿಂದ ತಪ್ಪಿಸಿಕೊಳ್ಳುವುದಕ್ಕೆ ವಿನಾಯಿತಿ ನೀಡಬೇಕೆಂದು ಹರೀಶ್ ರಾವತ್ ನಿನ್ನೆ ಉತ್ತರಾಖಂಡ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು, ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸಿಬಿಐ ಮುಂದೆ ಹಾಜರಾಗುವ ಅವಶ್ಯಕತೆ ಇಲ್ಲ ಎಂದು ಹೇಳಿ, ಪ್ರಕರಣವನ್ನು ಜನವರಿ 7ಕ್ಕೆ ವಿಚಾರಣೆ ಮುಂದೂಡಿದೆ.

ಹರೀಶ್ ರಾವತ್ ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗುವಂತೆ ಡಿಸೆಂಬರ್ 23 ರಂದು ಸಿಬಿಐ ಸಮನ್ಸ್ ನೀಡಿತ್ತು. ತಮಗೆ ವಿಧಾನಸಭೆಯಲ್ಲಿ ಬೆಂಬಲ ನೀಡುವಂತೆ ಸಿಎಂ ಹರೀಶ್ ರಾವತ್ ಕಾಂಗ್ರೆಸ್ ಶಾಸಕರಿಗೆ ಲಂಚದ ಆಮೀಷ ಒಡ್ಡಿದ್ದನ್ನು ಸ್ಟಿಂಗ್ ಆಪರೇಷನ್ ಮೂಲಕ ಬಯಲು ಮಾಡಲಾಗಿತ್ತು. ಈ ಸಂಬಂಧ ಏಪ್ರಿಲ್ 29 ರಂದು ಪ್ರಾಥಮಿಕ ತನಿಖೆ ನಡೆಸಿ, ಕೇಸು ದಾಖಲಿಸಿತ್ತು. ಆದರೆ ಈ ಆರೋಪವನ್ನು ಹರೀಶ್ ರಾವತ್ ತಳ್ಳಿ ಹಾಕಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ತಮಿಳುನಾಡು ಸಿಎಂ ವಿಜಯ್-ಪ್ರಧಾನಿ ಮೋದಿ ಭೇಟಿ: ಎರಡು ದೊಡ್ಡ ಬೇಡಿಕೆ; ಇಲ್ಲಿದೆ ವಿವರ..

'ಬಹುಶಃ ರಾಹುಲ್ ಗಾಂಧಿಗೆ ಈಗ ತೃಪ್ತಿಯಾಗಿರಬಹುದು': ED ದಾಳಿ ಕುರಿತು ಮಾಜಿ ಸಿಎಂ ಪಿಣರಾಯಿ ವಿಜಯನ್ ಕಿಡಿ

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

SCROLL FOR NEXT