ದೇಶ

ಕೇಂದ್ರೀಯ ಸಂಸ್ಥೆಗಳ ಮೂಲಕ ರಾಜಕೀಯ ಪಕ್ಷಗಳ ಮೇಲೆ ಬಿಜೆಪಿ ಒತ್ತಡ: ಮಾಯಾವತಿ

Manjula VN

ಲಖನೌ: ಹತಾಶೆಗೊಂಡಿರುವ ಬಿಜೆಪಿ ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಳ್ಳುವ ಮೂಲಕ ರಾಜಕೀಯ ಪಕ್ಷಗಳ ಮೇಲೆ ಒತ್ತಡವನ್ನು ಹೇರುತ್ತಿದೆ ಬಿಎಸ್ ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ಸೋಮವಾರ ಆರೋಪಿಸಿದ್ದಾರೆ.

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ. ಉತ್ತರಪ್ರದೇಶದಲ್ಲಿ ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಮೈತ್ರಿಗಳ್ಳುವಂತೆ ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಬಿಜೆಪಿ ಒತ್ತಡ ಹೇರುತ್ತಿದೆ ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷಗಳು ಮೈತ್ರಿಯಾಗುತ್ತಿವೆ ಎಂದು ಹೇಳಲಾಗುತ್ತಿದೆ. ಆದರೆ, ಬಿಜೆಪಿಯ ಅಂತಿಮ ನಿರ್ಧಾರದ ನಂತರವಷ್ಟೇ ಪಕ್ಷಗಳು ಮೈತ್ರಿಯಾಗುತ್ತವೆಯೋ ಅಥವಾ ಇಲ್ಲವೋ ಎಂಬುದು ಬಹಿರಂಗಗೊಳ್ಳಲಿದೆ. ಮುಲಾಯಂ ಸಿಂಗ್ ರಂತೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಚುನಾವಣೆಗೂ ಮುನ್ನ ತಪ್ಪು ಭರವಸೆಗಳನ್ನು ನೀಡುತ್ತಿದ್ದಾರೆ. ಆದರೆ, ಉತ್ತರಪ್ರದೇಶದಲ್ಲಿ ಅವರು ಗೆಲವು ಸಾಧಿಸುವುದಿಲ್ಲ. ಬಿಎಸ್ ಪಿ ಅಧಿಕಾರದಲ್ಲಿದ್ದಾಗ ಬಿಜೆಪಿ ದುರ್ಬಲವಾಗಿತ್ತು. ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದಾಗ ಬಿಜೆಪಿ ಶಕ್ತಿ ಮತ್ತೆ ಬಂದಿತು. ಬಿಜೆಪಿ ಹಾಗೂ ಸಮಾಜವಾದಿ ಪಕ್ಷ ಒಂದಾಗಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ.

ನೋಟು ನಿಷೇಧದಿಂದ ಶೇ.90 ರಷ್ಟು ಜನರು ಬೇಸರಗೊಂಡಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಗೆ ಸರಿಯಾದ ಪಾಠವನ್ನು ಕಲಿಸಲಿದ್ದಾರೆಂದು ತಿಳಿಸಿದ್ದಾರೆ.

SCROLL FOR NEXT