ಸೋನಿಯಾ ಗಾಂಧಿ, ರಾಹುಲ್ ಗಾಂಧಿ
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲ ಕೋರ್ಟ್ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧೀಗೆ ಬಿಗ್ ರಿಲೀಫ್ ಸಿಕ್ಕಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸುತ್ತಿದ್ದ ಕಂಪನಿಯ ಹಣವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಂಡಿದೆ ಎಂದು ಹೇಳಿ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅರೋಪಿಸಿದ್ದರು. ಅಕೌಂಟ್ ಡಿಟೇಲ್ಸ್ ಮತ್ತು ತೆರಿಗೆ ಪಾವತಿ ದಾಖಲೆ ಕೋರಿ ಸ್ವಾಮಿ ಕೋರ್ಟ್ ಮೆಟ್ಟಿಲೇರಿದ್ದರು.
ಕಳೆದ ಆಗಸ್ಟ್ ತಿಂಗಳಿನಲ್ಲಿ ನ್ಯಾಯಾಲಯವು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ನೋಟಿಸ್ ವೊಂದನ್ನು ಜಾರಿ ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವಾಲಯ, ಆದಾಯ ತೆರಿಗೆ ಇಲಾಖೆ ಮತ್ತಿತರ ಸಂಸ್ಥೆಗಳು ದಾಖಲೆ ಪತ್ರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನೋಟಿಸ್ ನಲ್ಲಿ ತಿಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ನ್ಯಾಯಾಲಯವು ಆದೇಶವನ್ನು ತಡೆಹಿಡಿದಿದ್ದು, ಡಿ.26 ಕ್ಕೆ ಆದೇಶ ನೀಡಲಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics