ಆರ್ಥಿಕ ತಜ್ಞರನ್ನು ಭೇಟಿ ಮಾಡಲಿರುವ ಪ್ರಧಾನಿ ಮೋದಿ: ಬಜೆಟ್, ನೋಟು ನಿಷೇಧದ ಬಗ್ಗೆ ಮುಖ್ಯ ಚರ್ಚೆ
ಆರ್ಥಿಕ ತಜ್ಞರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ನೋಟು ನಿಷೇಧ, ಬಜೆಟ್ ವಿಷಯಗಳು ಪ್ರಮುಖವಾಗಿ ಚರ್ಚೆಗೆ ಬರಲಿರುವ ವಿಷಯಗಳಾಗಿವೆ.
ನವದೆಹಲಿ: ಆರ್ಥಿಕ ತಜ್ಞರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ನೋಟು ನಿಷೇಧ, ಬಜೆಟ್ ವಿಷಯಗಳು ಪ್ರಮುಖವಾಗಿ ಚರ್ಚೆಗೆ ಬರಲಿರುವ ವಿಷಯಗಳಾಗಿವೆ.
ನ.8 ರಂದು ನೋಟು ನಿಷೇಧ ಕ್ರಮವನ್ನು ಘೋಷಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಆರ್ಥಿಕ ತಜ್ಞರೊಂದಿಗೆ ನಡೆಸುತ್ತಿರುವ ಮೊದಲ ಸಭೆ ಇದಾಗಿದೆ. 2017-18 ನೇ ಸಾಲಿನ ಬಜೆಟ್ ಗೆ ಆರ್ಥಿಕ ತಜ್ಞರಿಂದ ಸಲಹೆಪಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ನೋಟು ನಿಷೇಧದ ಬಗ್ಗೆಯೂ ಚರ್ಚಿಸಲಿದ್ದಾರೆ.
ನೀತಿ ಆಯೋಗದ ಸದಸ್ಯರು, ವಾಣಿಜ್ಯ, ಹಣಕಾಸು ಇಲಾಖೆ ಕಾರ್ಯದರ್ಶಿಗಳು ಸಾರ್ವಜನಿಕ ಹಣಕಾಸು ಮತ್ತು ನೀತಿನಿರೂಪಣಾ ರಾಷ್ಟ್ರೀಯ ಸಂಸ್ಥೆ (ಎನ್ಐಪಿಎಫ್ ಪಿ) ನಿರ್ದೇಶಕ ರಥಿನ್ ರಾಯ್ ಸೇರಿದಂತೆ ಹಲವು ಅಧಿಕಾರಿಗಳು, ತಜ್ಞರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.