ಬಿಎಸ್ಪಿ ನಾಯಕಿ ಮಾಯಾವತಿ 
ದೇಶ

ಬಿಜೆಪಿಯ ಗ್ರೀನ್ ಸಿಗ್ನಲ್ ಸಿಕ್ಕರೆ ಮಾತ್ರ ಉತ್ತರ ಪ್ರದೇಶದಲ್ಲಿ ಎಸ್ಪಿ-ಕಾಂಗ್ರೆಸ್ ಮೈತ್ರಿ ಸಾಧ್ಯ: ಮಾಯಾವತಿ

2017 ನೇ ಸಾಲಿನ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು...

ನವದೆಹಲಿ: 2017 ನೇ ಸಾಲಿನ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುತ್ತಿವೆ ಎಂಬ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿರುವ ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ, ಅದಕ್ಕೆ ಬಿಜೆಪಿ ಹಸಿರು ನಿಶಾನೆ ತೋರಿಸಿದರೆ ಮಾತ್ರ ಸಾಧ್ಯವಾಗುತ್ತದೆ ಎಂದು ಹೇಳಿದರು.
ಲಕ್ನೋದಲ್ಲಿ ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನ ಮೈತ್ರಿ ಬಿಜೆಪಿ ಗ್ರೀನ್ ಸಿಗ್ನಲ್ ಕೊಟ್ಟರೆ ಮಾತ್ರ ಸಾಧ್ಯ. ಮೈತ್ರಿಯಿಂದ ತನಗೆ ಉಪಕಾರವಾಗುತ್ತದೆ ಎಂದು ಮನಗಂಡರೆ ಮಾತ್ರ ಬಿಜೆಪಿ ಗ್ರೀನ್ ಸಿಗ್ನಲ್ ಕೊಡಲು ಸಾಧ್ಯ ಎಂದು ಆರೋಪಿಸಿದರು.
ಇಂದು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನೋಟು ನಿಷೇಧ ವಿಷಯಕ್ಕೆ ಹರಿಹಾಯ್ದ ಅವರು, ಕೇಂದ್ರ ಸರ್ಕಾರದ ಈ ನಡೆಯಿಂದಾಗಿ ಉತ್ತರ ಪ್ರದೇಶ ಚುನಾವಣೆಯಲ್ಲಿ ಅದಕ್ಕೆ ಸೋಲು ಕಾಣಲಿದೆ ಎಂದರು.
ಲೋಕಸಭೆಯಲ್ಲಿ ಮಾಡಿರುವ  ಭರವಸೆಗಳನ್ನು ಈಡೇರಿಸಲಾಗದೆ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಮೋದಿಯವರು ತರಾತುರಿಯಿಂದ ನೋಟುಗಳ ಅಮಾನ್ಯತೆಯನ್ನು ಜಾರಿಗೆ ತಂದರು. ಇದಕ್ಕೆ ಯಾವುದೇ ತಯಾರಿ ನಡೆಸಲಿಲ್ಲ. ಈಗ ಪ್ರಧಾನಿ ಕುತ್ತಿಗೆಗೆ ರಾಜಕೀಯ ಕಡಲುಕೋಳಿಯಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದರು.
ನೋಟುಗಳ ಅಮಾನ್ಯತೆ ಕಪ್ಪು ಹಣ ಮತ್ತು ಭ್ರಷ್ಟಾಚಾರವನ್ನು ಕಿತ್ತೊಗೆಯುವ ಪ್ರಯತ್ನ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಇದು ಕೇವಲ ಸ್ವ ಹಿತಾಸಕ್ತಿಯಿಂದ ಕೂಡಿದೆ. ಸಮಾಜದ ಬಡ ವರ್ಗದ ಜನ ಇನ್ನೂ ಕೂಡ ನೋಟುಗಳ ನಿಷೇಧದಿಂದುಂಟಾದ ಸಂಕಷ್ಟದಿಂದ ಹೊರಬಂದಿಲ್ಲ ಎಂದರು.
ನವೆಂಬರ್ 8ರಂದು ನೋಟು ನಿಷೇಧವಾದ ನಂತರ 50 ದಿನಗಳು ಕಳೆದರೂ ಬಡವರು, ರೈತರು, ಕಾರ್ಮಿಕರು ಮತ್ತು ಕೂಲಿಕಾರರು ಅದರ ಆಘಾತದಿಂದ ಹೊರಬಂದಿಲ್ಲ ಎಂದು ಮಾಯಾವತಿ ದೂರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ