ಮಹೊಬಾ: ಕಾನ್ಪುರದಲ್ಲಿ ಸಂಭವಿಸಿದ ಅಜ್ಮೆರ್-ಸೀಲ್ದಹ್ ಎಕ್ಸ್ ಪ್ರೆಸ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ರು.50,000 ಪರಿಹಾರ ಧನ ನೀಡುವುದಾಗಿ ಉತ್ತರ ಪ್ರದೇಶ ಸರ್ಕಾರ ಘೋಷಣೆ ಮಾಡಿದೆ.
ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಪರಿಹಾರ ಧನವನ್ನು ಘೋಷಣೆ ಮಾಡಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ರು.50,000 ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ ರು.25,000 ಹಣವನ್ನು ನೀಡುವುದಾಗಿ ಹೇಳಿದ್ದಾರೆ.
ರೈಲು ಹಳಿ ತಪ್ಪಿದ್ದರಿಂದಾಗಿ ಹಲವೆಡೆ ರೈಲು ಸಂಚಾರದಲ್ಲಿ ವ್ಯತ್ಯಗಳುಂಟುಗಾದೆ. ಈ ನಡುವೆ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಹೇಳಿಕೆಯನ್ನು ನೀಡಿದ್ದು, ಘಟನೆಯಲ್ಲಿ ಯಾರೊಬ್ಬರೂ ಸಾವನ್ನಪ್ಪಿಲ್ಲ. 44 ಮಂದಿ ಗಾಯಗೊಂಡಿದ್ದು, ಈಗಾಗಲೇ ಗಾಯಾಳುಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.