ರೈಲ್ವೆ ಸಚಿವ ಸುರೇಶ್ ಪ್ರಭು 
ದೇಶ

ಅಜ್ಮೀರ್-ಸಿಯಲ್ದಾಹ್ ಎಕ್ಸ್ ಪ್ರೆಸ್; ದುರಂತ ದುರಾದೃಷ್ಟಕರ- ಸುರೇಶ್ ಪ್ರಭು

ಅಜ್ಮೀರ್-ಸಿಯಲ್ದಾಹ್ ಎಕ್ಸ್ ಪ್ರೆಸ್ ರೈಲು ದುರಂತವೊಂದು ದುರಾದೃಷ್ಟಕರ ಘಟನೆಯಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಬುಧವಾರ ಹೇಳಿದ್ದಾರೆ...

ನವದೆಹಲಿ: ಅಜ್ಮೀರ್-ಸಿಯಲ್ದಾಹ್ ಎಕ್ಸ್ ಪ್ರೆಸ್ ರೈಲು ದುರಂತವೊಂದು ದುರಾದೃಷ್ಟಕರ ಘಟನೆಯಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಬುಧವಾರ ಹೇಳಿದ್ದಾರೆ.

ಘಟನೆ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕಾನ್ಪುರದ ಅಜ್ಮೀರ್-ಸಿಯಲ್ದಾಹ್ ಎಕ್ಸ್ ಪ್ರೆಸ್ ರೈಲು ದುರಂತ ದುರಾದೃಷ್ಟಕರವಾಗಿದ್ದು, ಘಟನೆ ಕುರಿತು ಖುದ್ದು ವೈಯಕ್ತಿಕವಾಗಿ ಪರಿಶೀಲನೆ ನಡೆಸುತ್ತಿದ್ದೇನೆಂದು ಹೇಳಿದ್ದಾರೆ.

ಘಟನಾ ಸ್ಥಳದ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಕೂಡಲೇ ಭೇಟಿ ನೀಡುವಂತೆ ಈಗಾಗಲೇ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ವೈದ್ಯಕೀಯ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪ್ರಕರಣ ಕುರಿತು ತನಿಖೆ ನಡೆಸಲಾಗುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕ ಪ್ರಮುಖ ಕಾರಣ ತಿಳಿದುಬರಲಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಅಗತ್ಯ ಸಹಾಯ ಕಾರ್ಯಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ. ಮೆಡಿಕಲ್ ವಾಹನಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಗಾಯಗೊಂಡವರಿಗೆ ಈಗಾಗಲೇ ಚಿಕಿತ್ಸೆಯನ್ನು ಆರಂಭಿಸಲಾಗಿದೆ. ಪ್ರತಿಯೊಬ್ಬ ಗಾಯಾಳುಗಳನ್ನು ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ. ಆಸ್ಪತ್ರೆಗಳು ಹಾಗೂ ಜಿಲ್ಲಾ ಆಡಳಿತ ಮಂಡಳಿಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದ್ದು, ಸಾಧ್ಯವಾದಷ್ಟು ಅಗತ್ಯ ಸಹಾಯಕ ಕಾರ್ಯಗಳನ್ನು ಮಾಡುವಂತೆ ತಿಳಿಸಲಾಗಿದೆ. ಇನ್ನು ಕೆಲ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂದುವರೆಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಗಾಯಾಳುಗಳಿಗೆ ಹಾಗೂ ಮೃತರ ಕುಟುಂಬಗಳಿಗೆ ಸರ್ಕಾರ ಪರಿಹಾರ ನೀಡಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!