ವಿಕೆ ಶಸಿಕಲಾ 
ದೇಶ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಶಸಿಕಲಾ ಅವಿರೋಧ ಆಯ್ಕೆ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ವಿಕೆ ಶಸಿಕಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯಲಲಿತಾ ಅವರ ನಿಧನದ ನಂತರ ತೆರವಾಗಿದ್ದ ಪ್ರಧಾನ ..

ಚೆನ್ನೈ: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ವಿಕೆ ಶಸಿಕಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯಲಲಿತಾ ಅವರ ನಿಧನದ ನಂತರ ತೆರವಾಗಿದ್ದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ, ಅವರ ಆಪ್ತೆಯಾಗಿದ್ದ ಶಸಿಕಲಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಇಂದು ಬೆಳಗ್ಗೆ ಪಕ್ಷದ ಸ್ಥಾಯಿ ಸಮಿತಿ ಅಧ್ಯಕ್ಷ ಇ-ಮಧುಸೂದನ್ ಮತ್ತು ಹಿರಿಯ ನಾಯಕರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಮಂಡಳಿ ಸಭೆಯಲ್ಲಿ ನಿರ್ಣಯ ಪಾಸು ಮಾಡಲಾಗಿದೆ.

ಕಳೆದ 33 ವರ್ಷಗಳಿಂದ ಜಯಲಲಿತಾ ಅವರ ಜೊತೆಯಲ್ಲಿಯೇ ಇದ್ದ ಶಸಿಕಲಾರಿಗೆ ಬಹು ದೊಡ್ಡ ಅನುಭವವಿದೆ, ಹೀಗಾಗಿ ಪಕ್ಷದ ಎಲ್ಲಾ ವ್ಯವಹಾರಗಳನ್ನು ನಿಭಾಯಿಸುತ್ತಾರೆ ಎಂದು ಪಕ್ಷದ ಮಂಡಳಿ ಸಭೆಯಲ್ಲಿ ಅಭಿಪ್ರಾಯ ಮೂಡಿದೆ.

ಎಂಜಿಆರ್ ನಿಧನದ ನಂತರ ಜಯಲಲಿತಾ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಈಗ ಜಯಲಲಿತಾ ಅವರ ಎಲ್ಲಾ ಜವಾಬ್ದಾರಿಗಳನ್ನು ಚಿನ್ನಮ್ಮ ಶಸಿಕಲಾ ನಿರ್ವಹಿಸುತ್ತಾರೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಪಕ್ಷದ ಪ್ರಧಾನ ಮಂಡಳಿ ಸಭೆಯ ನಂತರ, ಎಐಎಡಿಎಂಕೆ ಹಿರಿಯ ನಾಯಕರು ಶಸಿಕಲಾ ಅವರನ್ನು ಪೋಯಸ್  ಗಾರ್ಡನ್ ನಲ್ಲಿ ಭೇಟಿಯಾಗಿ ನಿರ್ಣಯದ ಪ್ರತಿಯನ್ನು ಹಸ್ತಾಂತರಿಸಿದರು. ಇನ್ನೂ ಜಯಲಲಿತಾ ಅವರಿಗೆ ಮ್ಯಾಗಸ್ಸೇ ಪ್ರಶಸ್ತಿ ಮತ್ತು ನೊಬೆಲ್ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಣಯ ಅಂಗೀಕರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್