ನವದೆಹಲಿ: ಪಂಜಾಬ್ ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ನನ್ನ ವಿರುದ್ಧ ಸ್ಪರ್ಧಿಸಿ ಎಂದು ಪಂಜಾಬ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಗುರುವಾರ ಸವಾಲು ಹಾಕಿದ್ದಾರೆ.
ಈ ಹಿಂದಷ್ಟೇ ಅಮರಿಂದರ್ ಸಿಂಗ್ ಅವರ ಕುರಿತಂತೆ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದ ಕೇಜ್ರಿವಾಲ್ ಅವರು, ನೀವು ಪ್ರಕಾಶ್ ಸಿಂಗ್ ಬಾದಲ್, ಸುಖ್ಬೀರ್ ಬಾದಲ್, ಬಿಕ್ರಮ್ ಮಜಿಥಿಯಾ ಅವರ ವಿರುದ್ಧ ಸ್ಪರ್ಧಿಸುತ್ತಿದ್ದೀರಾ?... ನಿಮ್ಮ ಕುರ್ಚಿಯನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಸ್ಪರ್ಧೀಸುತ್ತಿದ್ದೀರಾ ಎಂದು ಪ್ರಶ್ನಿಸಿದ್ದರು.
ಈ ಹೇಳಿಕೆಗೆ ಟ್ವಿಟರ್ ನಲ್ಲಿ ತಿರುಗೇಟು ನೀಡಿರುವ ಅಮರಿಂದರ್ ಸಿಂಗ್ ಅವರು, ಪಂಜಾಬ್ ನಲ್ಲಿ ಬಾದಲ್ ಅವರ ಅಧ್ಯಾಯ ಮುಗಿದು ಹೋಗಿದೆ. ಇದೀಗ ಕೇಜ್ರಿವಾಲ್ ಪಂಜಾಬ್ ಗೆ ಬಂದು ನನ್ನ ವಿರುದ್ಧ ಸ್ಪರ್ಧಿಸಬೇಕಿದೆ ಎಂದು ಹೇಳಿದ್ದಾರೆ.
ಬಾದಲ್ ಅವರ ಕಥೆ ಮುಗಿದಿದೆ. ಇದೀಗ ನೀವು ಹೇಳಿ...ಯಾವ ಕ್ಷೇತ್ರದಲ್ಲಿ ನೀವು ಸ್ಪರ್ಧಿಸುತ್ತಿದ್ದೀರ...? ಆ ಕ್ಷೇತ್ರಕ್ಕೇ ಬಂದು ನಾನು ನಿಮ್ಮ ವಿರುದ್ಧ ಸ್ಪರ್ಧಿಸುತ್ತೇನೆಂದು ಹೇಳಿಕೊಂಡಿದ್ದಾರೆ.