ಕಾಶ್ಮೀರ: ಭದ್ರತಾ ಪಡೆ ಉಗ್ರರ ನಡುವೆ ಗುಂಡಿನ ಚಕಮಕಿ
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಉತ್ತರ ಕಾಶ್ಮೀರದ ಬಂದಿಪೊರ ಪಟ್ಟಣದಲ್ಲಿ ಘಟನೆ ನಡೆದಿದ್ದು ಡಿ.29 ರ ಬೆಳಿಗ್ಗೆ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದಾರೆ.
ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ಉಗ್ರ ಹಾಗೂ ಕಣಿವೆಯ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಇತ್ತೀಚೆಗಷ್ಟೇ ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿತ್ತು. ಇದಕ್ಕೆ ಸೇಡು ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಉಗ್ರರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದು ಇಬ್ಬರು ಸೇನಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಉಗ್ರರಿಗಾಗಿ ಶೋಧಕಾರ್ಯ ಪ್ರಾರಂಭವಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.