ಅನಿಲ್ ಬೈಜಾಲ್ 
ದೇಶ

ದೆಹಲಿ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಅನಿಲ್ ಬೈಜಾಲ್ ನೇಮಕ

ನಜೀಬ್ ಜಂಗ್ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಅಂಗೀಕರಿಸಿದ್ದು, ತೆರವಾಗಿದ್ದ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಅನಿಲ್ ಬೈಜಾಲ್ ಅವರನ್ನು ಗುರುವಾರ ನೇಮಕ ಮಾಡಿದ್ದಾರೆ...

ನವದೆಹಲಿ: ನಜೀಬ್ ಜಂಗ್ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಅಂಗೀಕರಿಸಿದ್ದು, ತೆರವಾಗಿದ್ದ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಅನಿಲ್ ಬೈಜಾಲ್ ಅವರನ್ನು ಗುರುವಾರ ನೇಮಕ ಮಾಡಿದ್ದಾರೆ.

ನಜೀಬ್ ಜಂಗ್ ಅವರು ಡಿಸೆಂಬರ್ 22 ರಂದು ದಿಢೀರನೇ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಅನಿಲ್ ಬೈಜಾಲ್ ಅವರ ಹೆಸರನ್ನು ಶಿಫಾರಸು ಮಾಡಿತ್ತು.

ಕೇಂದ್ರದ ಈ ಶಿಫಾರಸಿಗೆ ಇಂದು ಪ್ರಣಬ್ ಮುಖರ್ಜಿಯವರು ಗ್ರೀನ್ ಸಿಗ್ನಲ್ ನೀಡಿದ್ದು, ದೆಹಲಿ ಲೆಫ್ಟಿನೆಂಟ್ ಗವರ್ನರ್ ಹಿದ್ದುಗೆ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಕೇಂದ್ರ ಮಾಡಿ ಗೃಹ ಕಾರ್ಯದರ್ಶಿ ಅನಿಲ್ ಬೈಜಾಲ್ ಅವರನ್ನು ನೇಮಕ ಮಾಡಿದ್ದಾರೆ.

1969ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದ ಬೈಜಾಲ್ ಅವರು 2006ರಲ್ಲಿ ಸೇವೆಯಿಂದ ನಿವೃತ್ತಿಯಾಗಿದ್ದರು. 2004ರ ಮೇ ತಿಂಗಳಿನಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಯಿಂದ ಬೈಜಾಲ್ ಅವರನ್ನು ಕಿತ್ತುಹಾಕಲಾಗಿತ್ತು. 2006ರಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಬಳಿಕ ಹಲವಾರು ಕಾರ್ಪೋರೇಟ್ ಸಂಸ್ಥೆಗಳ ಮಂಡಳಿಗಳಲ್ಲಿ ಬೈಜಾಲ್ ಅವರು ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ