ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ವಿರುದ್ಧ ಆಧಾರ ರಹಿತ ಸುಳ್ಳು ಆರೋಪ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಬಿಜೆಪಿ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗುಜರಾತ್ ಬ್ಯಾಂಕ್ ವೊಂದರಲ್ಲಿ ಅಮಿತ್ ಶಾ 500 ಕೋಟಿ ರು ಹಣ ಡೆಪಾಸಿಟ್ ಮಾಡಿದ್ದಾರೆ ಎಂಬ ಕಾಂಗ್ರೆಸ್ ಆರೋಪವನ್ನು ನಿರಾಕರಿಸಿರುವ ಅವರು, ಗುಜರಾತ್ ನ ಆ ಬ್ಯಾಂಕ್ ಸುಮಾರು 200 ಶಾಖೆಗಳನ್ನು ಹೊಂದಿದೆ. ಬ್ಯಾಂಕ್ ಈ ಸಂಬಂಧ ವಿವರಣೆ ನೀಡುತ್ತದೆ ಎಂದು ಹೇಳಿದ್ದಾರೆ. ಇನ್ನೂ 13,860 ಕೋಟಿ ಆದಾಯ ಘೋಷಿಸಿಕೊಂಡಿರುವ ಉದ್ಯಮಿ ಮಹೇಶ್ ಶರ್ಮಾ ಜೊತೆ ಅಮಿತ್ ಶಾ ಹಾಗೂ ಮೋದಿ ಅವರಿಗೆ ಯಾವುದೇ ನಂಟಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಇಬ್ಬರು, ಉದ್ಯಮಿ ಮಹೇಶ್ ಶರ್ಮಾ ಅವರ ಜೊತೆ ಯಾವ ಸಂಬಂದಧವನ್ನು ಹೊಂದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಬಳಿ ಸಾಕ್ಷಿ ಇದ್ದರೇ ಸಾಬೀತು ಪಡಿಸಲಿ, ಅದನ್ನು ಬಿಟ್ಟು ಸುಳ್ಳು ಆರೋಪ ಮಾಡಿದರೇ ನಾವು ಕಾಂಗ್ರೆಸ್ ವಿರುದ್ಧ ಕಾನೂನು ಸಮರಕ್ಕೆ ಇಳಿಯಬೇಕಾಗುತ್ತದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಎಚ್ಚರಿಸಿದ್ದಾರೆ.