ಎಸ್ ಪಿ ತ್ಯಾಗಿ 
ದೇಶ

ವಿವಿಐಪಿ ಕ್ಯಾಪ್ಟರ್ ಹಗರಣ: ತ್ಯಾಗಿ ಜಾಮೀನು ಪ್ರಶ್ನಿಸಿದ ಸಿಬಿಐ, ಹೈಕೋರ್ಟ್ ನಿಂದ ನೋಟಿಸ್

ವಿವಿಐಪಿ ಅಗಸ್ಟಾ ವೆಸ್ಟ್ ಲ್ಯಾಂಡ್ ಕ್ಯಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ...

ನವದೆಹಲಿ: ವಿವಿಐಪಿ ಅಗಸ್ಟಾ ವೆಸ್ಟ್ ಲ್ಯಾಂಡ್ ಕ್ಯಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿ ಅವರ ಜಾಮೀನು ಪ್ರಶ್ನಿಸಿ ಶುಕ್ರವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಕಳೆದ ಸೋಮವಾರ ಜಾಮೀನಿನ ಮೇಲೆ ಬಿಡುಗಡೆಯಾದ ಎಸ್ ಪಿ ತ್ಯಾಗಿ ಅವರಿಗೆ ಇಂದು ನೋಟಿಸ್ ನೀಡಿದೆ.
ಡಿಸೆಂಬರ್ 9ರಂದು ಸಿಬಿಐ ಅಧಿಕಾರಿಗಳು ಎಸ್ ಪಿ ತ್ಯಾಗಿ ಅವರನ್ನು ಬಂಧಿಸಿದ್ದರು. ಆದರೆ ಲಂಚ ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳು ನೀಡದ ಹಿನ್ನಲೆಯಲ್ಲಿ ವಿಶೇಷ ಕೋರ್ಟ್ ಜಾಮೀನು ಮಂಜರೂ ಮಾಡಿತ್ತು.
72 ವರ್ಷದ ತ್ಯಾಗಿ ಅವರನ್ನು ಸಿಬಿಐ ಅಧಿಕಾರಿಗಳು ಏಳು ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದರು.
3,600 ಕೋಟಿ ರು. ಮೌಲ್ಯದ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಎಸ್.ಪಿ.ತ್ಯಾಗಿ, ಅವರ ಸಹೋದರ ಸಂಬಂಧಿ ಸಂಜೀವ್ ತ್ಯಾಗಿ ಹಾಗೂ ಗೌತಮ್ ಖೇತನ್ ಅವರನ್ನು ಸಿಬಿಐ ದೆಹಲಿಯಲ್ಲಿ ಬಂಧಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT