ಪುಣೆ: ಮಹಾರಾಷ್ಟ್ರದ ಪುಣೆಯ ಕೊಂಡ್ವಾ ಪ್ರದೇಶದಲ್ಲಿನ ಬೇಕರಿಯೊಂದರಲ್ಲಿ ಬೆಂಕಿ ಹತ್ತಿಕೊಂಡು ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ.
ಇಲ್ಲಿನ ಬೇಕ್ಸ್ ಮತ್ತು ಕೇಕ್ಸ್ ಅಂಗಡಿಯ ನೆಲ ಮಳಿಗೆಯಲ್ಲಿ ಇಂದು ಬೆಳಗಿನ ಜಾವ ಬೆಂಕಿ ಹತ್ತಿಕೊಂಡು ಉರಿಯಿತು. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಬೇಕರಿಗೆ ಹೊರಗಿನಿಂದ ಬಾಗಿಲು ಹಾಕಿದ್ದರಿಂದಾಗಿ ಬೆಂಕಿ ಹತ್ತಿಕೊಂಡಾಗ ಬೇಕರಿಯೊಳಗೆ ನಿದ್ದೆ ಮಾಡುತ್ತಿದ್ದ ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಕಾರ್ಮಿಕರನ್ನು ಒಳಗೆ ಕೂಡಿ ಹಾಕಿ ಹೊರಗಿನಿಂದ ಬೀಗ ಹಾಕಿ ಹೋಗಲು ಕಾರಣವೇನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.