ತಕಂ ಪರಿಯೊ ಅರುಣಾಚಲ ಪ್ರದೇಶದ ನೂತನ ಮುಖ್ಯಮಂತ್ರಿ?
ಪಕ್ಷ ವಿರೋಧಿ ಆರೋಪದ ಮೇಲೆ ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ನಿಂದ ಅಮಾನತಾಗಿರುವ ಹಿನ್ನೆಲೆಯಲ್ಲಿ ಪೀಪಲ್ಸ್ ಪಾರ್ಟಿ ಪಕ್ಷದಿಂದ ಅರುಣಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಶಾಸಕ ತಕಂ ಪರಿಯೊ ಆಯ್ಕೆಯಾಗುವ ಸಾಧ್ಯತೆ ಇದೆ.
ಇಟಾನಗರ: ಪಕ್ಷ ವಿರೋಧಿ ಆರೋಪದ ಮೇಲೆ ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ನಿಂದ ಅಮಾನತಾಗಿರುವ ಹಿನ್ನೆಲೆಯಲ್ಲಿ ಪೀಪಲ್ಸ್ ಪಾರ್ಟಿ ಪಕ್ಷದಿಂದ ಅರುಣಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಶಾಸಕ ತಕಂ ಪರಿಯೊ ಆಯ್ಕೆಯಾಗುವ ಸಾಧ್ಯತೆ ಇದೆ.
ಪೀಪಲ್ಸ್ ಪಾರ್ಟಿ ಪಕ್ಷಕ್ಕೆ ಹೊಸ ಶಾಸಕಾಂಗ ನಾಯಕನ ಆಯ್ಕೆಯಾಗಬೇಕಿದ್ದು, ಅತಿ ಶ್ರೀಮಂತ ಶಾಸಕನಾಗಿರುವ ತಕಂ ಪರಿಯೋ ಅವರನ್ನು ಶಾಸಕಾಂಗ ಪಕ್ಷದ ಮುಖ್ಯಸ್ಥ (ಮುಖ್ಯಮಂತ್ರಿ)ಯನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಪಕ್ಷ ವಿರೋಧಿ ಆರೋಪದ ಮೇಲೆ ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ 7 ಶಾಸಕರನ್ನು ಪಕ್ಷದಿಂದ ಅಮಾನತು ಮಾಡಲು ಪೀಪಲ್ಸ್ ಪಾರ್ಟಿ ಪಕ್ಷದ ಅಧ್ಯಕ್ಷ ಖಫಾ ಬೆಂಗಿಯಾ ನಿರ್ಧಾರ ಕೈಗೊಂಡಿದ್ದಾರೆ. ಪೆಮಾ ಖಂಡು ಕಾಂಗ್ರೆಸ್ ನಿಂದ ಪಿಪಿಎ ಪಕ್ಷಕ್ಕೆ ಪಕ್ಷಾಂತರಗೊಂಡ ನಂತರ ನಬಮ್ ತುಕಿ ಅವರನ್ನು ಕೆಳಗಿಳಿಸಿ ಜುಲೈ 16 ರಂದು ಪೆಮಾ ಖಂಡು ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.