ಕಿರಣ್ಮೊಯ್ ನಂದಾ, ಮುಲಾಯಂ ಸಿಂಗ್ ಯಾದವ್ ಮತ್ತು ನರೇಶ್ ಅಗರ್ವಾಲ್
ನವದೆಹಲಿ:ಸಮಾಜವಾದಿ ಪಕ್ಷದಲ್ಲಿ ಗಂಟೆಗೊಂದು ಬೆಳವಣಿಗೆಗಳು ಆಗುತ್ತಲೇ ಇದೆ. ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಇಂದು ಕಿರಣ್ಮೊಯ್ ನಂದಾ ಮತ್ತು ನರೇಶ್ ಅಗರ್ವಾಲ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಅವರನ್ನು ಆರು ವರ್ಷಗಳ ಅವಧಿಗೆ ವಜಾ ಮಾಡಿದ ಕೆಲವೇ ಗಂಟೆಗಳಲ್ಲಿ ಮುಲಾಯಂ ಸಿಂಗ್ ಯಾದವ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಪಕ್ಷದ ಪ್ರಧಾನ ಕಾರ್ಯದರ್ಶಿಯ ಸಲಹೆ ಪಡೆಯದೆ ಈ ಸಭೆಯನ್ನು ಕರೆಯಲಾಗಿದ್ದು, ಅದರಲ್ಲಿ ಅಂಗೀಕರಿಸಿದ ಪ್ರಸ್ತಾವನೆಗಳು ಅಸಂವಿಧಾನಿಕ ಮತ್ತು ಕಾನೂನಿಗೆ ವಿರುದ್ಧ. ಈ ಸಭೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಈ ಮೊದಲು ಮುಲಾಯಂ ಸಿಂಗ್ ಯಾದವ್ ತಾವು ಹೊರಡಿಸಿದ ಪತ್ರದಲ್ಲಿ ಹೇಳಿದ್ದರು.
ಇಂದು ಬೆಳಗ್ಗೆ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ ಗೋಪಾಲ್ ವರ್ಮಾ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಸಭೆ ಕರೆದು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಪಕ್ಷದ ಅಧ್ಯಕ್ಷ ಎಂದು ಘೋಷಿಸಿದ್ದರು.