ಟಿಎಂಸಿ ನಾಯಕನ ಮನೆಯಲ್ಲಿ ಬರೋಬ್ಬರಿ 80 ಕಚ್ಚಾ ಬಾಂಬ್ ಪತ್ತೆ! (ಸಾಂದರ್ಭಿಕ ಚಿತ್ರ) 
ದೇಶ

ಟಿಎಂಸಿ ನಾಯಕನ ಮನೆಯಲ್ಲಿ ಬರೋಬ್ಬರಿ 80 ಕಚ್ಚಾ ಬಾಂಬ್ ಪತ್ತೆ!

ಪಶ್ಚಿಮ ಬಂಗಾಳದ ಟಿಎಸಿ ನಾಯಕರೊಬ್ಬರ ಮನೆಯಲ್ಲಿ ಬರೋಬ್ಬರಿ 80 ಕಚ್ಚಾ ಬಾಂಬ್ ದೊರೆತಿರುವ ಘಟನೆ ಬೀರ್ ಭೂಮ್ ನ ನನೂರ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ...

ಕೋಲ್ಕತಾ: ಪಶ್ಚಿಮ ಬಂಗಾಳದ ಟಿಎಸಿ ನಾಯಕರೊಬ್ಬರ ಮನೆಯಲ್ಲಿ ಬರೋಬ್ಬರಿ 80 ಕಚ್ಚಾ ಬಾಂಬ್ ದೊರೆತಿರುವ ಘಟನೆ ಬೀರ್ ಭೂಮ್ ನ ನನೂರ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಟಿಎಂಸಿ ನಾಯಕ ಸರೋಜ್ ಘೋಷ್ ಎಂಬುವವರ ಮನೆಯಲ್ಲಿ ಈ ಕಚ್ಚಾ ಬಾಂಬ್ ಗಳು ದೊರೆತಿರುವುದಾಗಿ ಹೇಳಲಾಗುತ್ತಿದ್ದು, ಕಚ್ಚಾ ಬಾಂಬ್ ಗಳ ಜೊತೆಗೆ ಬಾಂಬ್ ತಯಾರಿ ಮಾಡುವ ಉಪಕರಣಗಳು ದೊರೆತಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಕಚ್ಚಾ ಬಾಂಬ್ ಇರುವ ಕುರಿತಂತೆ ಮಾಹಿತಿ ತಿಳಿದ ಪೊಲೀಸರು ಇಂದು ಸರೋಜ್ ಘೋಷ್ ಅವರ ಮನೆಯ ಮೇಲೆ ದಾಳಿ ಮಾಡಿದ್ದರು. ಈ ವೇಳೆ 80ಕ್ಕೂ ಹೆಚ್ಚು ಕಚ್ಚಾ ಬಾಂಬ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಂತರ ಬಾಂಬ್ ನಿಷ್ಕ್ರಿಯ ದಳ ಪೊಲೀಸರು ವಶಪಡಿಸಿಕೊಂಡ ಕಚ್ಚಾ ಬಾಂಬ್ ಗಳನ್ನು ನಿಷ್ಕ್ರಿಯಗೊಳಿಸಿದ್ದಾರೆಂದು ಹೇಳಲಾಗುತ್ತಿದೆ.

ಚುನಾವಣಾ ಪ್ರಕ್ರಿಯೆ ವೇಳೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರಕ್ಕಾಗಿ ಕಚ್ಚಾ ಬಾಂಬ್ ಗಳನ್ನು ಬಳಸಲಾಗುತ್ತಿದ್ದು, ಇತ್ತೀಚೆಗಷ್ಟೇ ಅಮೋಧ್ ಪುರ ಗ್ರಾಮದಲ್ಲಿ ಟಿಎಂಸಿ ನಾಯಕರೊಬ್ಬರ ಮನೆಯಲ್ಲಿ ಬಾಂಬ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT