ನವದೆಹಲಿ: ಸಹಸ್ತ್ರ ಸೀಮಾ ಬಲ(ಎಸ್ಎಸ್ಬಿ)ದ ಮೊದಲ ಮಹಿಳಾ ಪೊಲೀಸ್ ಮಹಾ ನಿರ್ದೇಶಕಿಯಾಗಿ ಐಪಿಎಸ್ ಅಧಿಕಾರಿ ಅರ್ಚನಾ ರಾಮಸುಂದರಮ್ ಅವರನ್ನು ಸೋಮವಾರ ನೇಮಕ ಮಾಡಲಾಗಿದೆ.
1980ರ ಐಪಿಎಸ್ ಬ್ಯಾಚ್ ನ ಅಧಿಕಾರಿ ಪ್ರಸ್ತುತ ನ್ಯಾಶನಲ್ ಕ್ರೈಮ್ ರೈಕಾರ್ಡ್ಸ್ ಬ್ಯೂರೋದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
2017ರ ತನಕ ಅರ್ಚನಾ ಎಸ್ ಎಸ್ ಬಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ. ಅಲ್ಲದೇ ಸಿಬಿಐನ ಹೆಚ್ಚುವರಿ ನಿರ್ದೇಶಕಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.